ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25ನೇ ಸಾಲಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ನೀಡಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2024ರ ಅಕ್ಟೋಬರ್ 17ರಂದು ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯAದು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯಮಟ್ಟದಲ್ಲಿ ನೀಡಲು ಪರಿಶಿಷ್ಟ ವರ್ಗದ ಜನಾಂಗದವರ ಏಳಿಗೆಗಾಗಿ ಶ್ರಮಿಸಿದ
ಅರ್ಹ ವ್ಯಕ್ತಿಗಳು, ಸ್ವಯಂ ಘೋಷಿತ ಅರ್ಜಿ ಮತ್ತು ದಾಖಲೆಗಳನ್ನು ದ್ವಿಪ್ರತಿಯಲ್ಲಿ ಸೆಪ್ಟೆಂಬರ್ 16 ರ ಸಂಜೆಯೊಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿತ್ರದುರ್ಗ ಅಥವಾ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಚಿತ್ರದುರ್ಗ ಇವರಿಗೆ ಪೂರ್ಣ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸುವಂತೆ ಚಿತ್ರದುರ್ಗ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೋರಿದ್ದಾರೆ.