ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿರುವ ಚಿತ್ರದುರ್ಗದ ಗ್ರೇಟ್ ಫೋರ್ಟ್ ಅಲ್ಪಸಂಖ್ಯಾತರ ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಘವನ್ನು, ಸಹಕಾರಿ ಅಧಿನಿಯಮ ಹಾಗೂ ಉಪನಿಯಮಗಳಂತೆ ಸಮಾಪನೆಗೊಳಿಸಲು,
ರಾಜ್ಯ ಸೌಹಾರ್ದ ಸಂಯುಕ್ತ ವ್ಯವಸ್ಥಾಪಕ ನಿರ್ದೇಶಕರು ಸಮಾಪನಾಧಿಕಾರಿ ನೇಮಿಸಲು ತೀರ್ಮಾನಿಸಿದ್ದಾರೆ. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪಣೆ ಇದ್ದಲ್ಲಿ 15 ದಿನಗಳೊಳಗಾಗಿ ಚಿತ್ರದುರ್ಗ ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಗೆ ಸಲ್ಲಿಸಲು ಪ್ರಕಟಣೆ ತಿಳಿಸಿದೆ.