ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25
ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ಸ್ಟೇಟ್ ಸ್ಕಾಲರ್ಶಿಫ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಆಯಾ ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಲು ತಿಳಿಸಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರ: ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಎಸ್..ಟಿ.ಎಸ್  SATS  ಸಂಖ್ಯೆ, ಆಧಾರ್ ಕಾರ್ಡ್, ತಂದೆತಾಯಿ ಅಥವಾ ಪೋಷಕರ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಮೊಬೈಲ್ ನಂಬರ್,

1 ರಿಂದ 8ನೇ ತರಗತಿಯವರೆಗೆ ವಿದ್ಯಾರ್ಥಿಗಳ ಕುಟುಂಬದ ಆದಾಯ ರೂ.6ಲಕ್ಷ ಹಾಗೂ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ಕುಟುಂಬದ ಆದಾಯ ರೂ.2.50 ಲಕ್ಷ ಮೀರಿರಬಾರದು. ಕಡ್ಡಾಯವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ನ್ನು ಎನ್.ಪಿ.ಸಿ.  (NPCI)      ನಲ್ಲಿ ಸೀಡಿಂಗ್ ಮಾಡಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಚಿತ್ರದುರ್ಗ ಸಹಾಯಕ ನಿರ್ದೇಶಕರು(ಗ್ರೇಡ್1) ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";