ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಕಾರ್ಯದಕ್ಷತೆ ಗುರುತಿಸಿ ಗೌರವಿಸುವ ಸಲುವಾಗಿ ನೀಡಲಾಗುವ 2026ನೇ ಸಾಲಿನ ಜಿಲ್ಲಾ ಮಟ್ಟದ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗಾಗಿ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ನಾಮ ನಿರ್ದೇಶನಗಳನ್ನು ಸಲ್ಲಿಸಲು ಇದೇ ಫೆ.25 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರದ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ ಹಾಗೂ ನೌಕರರು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಜಿಲ್ಲಾ, ರಾಜ್ಯ ಮಟ್ಟದ ಪ್ರಶಸ್ತಿ ಆಯ್ಕೆಗೆ ನಾಮನಿರ್ದೇಶನಗಳನ್ನು ಫೆ.26ರೊಳಗಾಗಿ ಆನ್‍ಲೈನ್ ಜಾಲತಾಣ https://dparar.karnataka.gov.inಟಿ ಅಥವಾ
https://sarvothamaawards.karnataka.gov.in ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕು. ಭೌತಿಕವಾಗಿ ಸಲ್ಲಿಸಿದ ಯಾವುದೇ ಮನವಿ ಹಾಗೂ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

