ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25
ನೇ ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅಭಿಯಾನ ಕೈಗೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿಗಳು ಅರ್ಜಿಗಳನ್ನು ಇಲಾಖೆ ವೆಬ್ಸೈಟ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ನಲ್ಲಿ ಕಾಲಾವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೋರಿದೆ.

 2024-25ನೇ ಸಾಲಿನಿಂದ ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಬಯೋಮೆಟ್ರಿಕ್ ಅಥೆಂಟಿಕೇಷನ್ ಮತ್ತು ಇಕೆವೈಸಿ ಕಡ್ಡಾಯವಾಗಿದೆ. ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲು ಕೇಂದ್ರ ಕಚೇರಿಯಿಂದ ಆದೇಶಿಸಿರುತ್ತಾರೆ.

ಅದರಂತೆ ಎಲ್ಲಾ ಅರ್ಹ ಫಲಾನುಭವಿಗಳು ಕೇಂದ್ರಗಳಿಗೆ ಭೇಟಿ ನೀಡಿ ಸಕಾಲದಲ್ಲಿ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಇಕೆವೈಸಿ ಪ್ರಕ್ರಿಯೆಗೆ ನೊಂದಣಿ ಮಾಡಿಸಲು ಕೋರಿದೆ.

 ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಸಹಾಯಕ ನಿರ್ದೇಶಕ ಕಚೇರಿ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳಿಂದ ಅರ್ಜಿ ಪಡೆಯಲು ಹಾಗೂ ಇಕೆವೈಸಿ ಮಾಡಲು ಫೆಸಿಲಿಟೇಷನ್ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.

  

- Advertisement -  - Advertisement -  - Advertisement - 
Share This Article
error: Content is protected !!
";