ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸಂಗೀತ
, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ – ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

2025-26ನೇ ಸಾಲಿನ ಶಿಷ್ಯವೇತನಕ್ಕೆ, ಆಯ್ಕೆ, ಪ್ರಕ್ರಿಯೆಯನ್ನು ಮೊಬೈಲ್ / ವಿಡಿಯೋ ಚಿತ್ರೀಕರಣದ ಮೂಲಕ ಆಯ್ಕೆ ಮಾಡಲು ಅಕಾಡೆಮಿ ತೀರ್ಮಾನಿಸಿದೆ.

- Advertisement - 

ಶಿವನೇತನ ಅರ್ಜಿಗಳ ಬಗ್ಗೆ ಮಾಹಿತಿಯನ್ನು ಅಕಾಡೆಮಿ ಪೇಸ್ ಬುಕ್ ನಲ್ಲಿ facebook.com/karnatakasangeetanrutyaacdemy, ಹಾಗೂ Sangeetanrityaacademy.karnataka.gov.in  ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.

ಅರ್ಜಿಯನ್ನು ಆಯಾ ಜಿಲ್ಲೆಯ ಕನ್ನಡ ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಪಡೆಯಬಹುದಾಗಿದೆ.

- Advertisement - 

ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಇನ್ನು ಮುಂದೆ ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್ / ವಿಡಿಯೋ ಚಿತ್ರೀಕರಿಸಿ ಪೆÉನ್ ಡ್ರೈವ್ ನಲ್ಲಿ ಅಳವಡಿಸಿ, ಪೆನ್ ಡ್ರೈವ್ ನೊಂದಿಗೆ ಅರ್ಜಿಯನ್ನು ರಿಜಿಸ್ಟ್ರಾರ್ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002 ಕಾರ್ಯಾಲಯಕ್ಕೆ, ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು.

ಈ ರೀತಿಯಾಗಿ ಬಂದ ಅರ್ಜಿಗಳನ್ನು ಆಯಾ ಕಲಾ ಪ್ರಕಾರಕ, ಅನುಗುಣವಾಗಿ ತೀರ್ಪುಗಾರರು ಅಭ್ಯರ್ಥಿಗಳು ಚಿತ್ರೀಕರಿಸಿ, ಕಳುಹಿಸಿಕೊಟ್ಟಿರುವ ಪೆನ್ ಡ್ರೈವ್ ಅನ್ನು ಪರಿಶೀಲಿಸಿ ಶಿಷ್ಯವೇತನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪಠ್ಯಕ್ರಮ ಚಿತ್ರೀಕರಿಸಿದ ಪೆನ್ ಡ್ರೈವ್ ನೊಂದಿಗೆ ಅರ್ಜಿಯನ್ನು ಸ್ವೀಕರಿಸಲು ಡಿಸೆಂಬರ್ 20 ಕೊನೆಯ ದಿನಾಂಕವಾಗಿದೆ. ತೀರ್ಪುಗಾರರ ತೀರ್ಮಾನವೇ ಅಂತಿಮ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Share This Article
error: Content is protected !!
";