ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಪ್ರಸ್ತಕ ಸಾಲಿನಲ್ಲಿ ನಡೆಯುವ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ವರ್ಗದ (ಎಸ್‌ಟಿ) ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ತಿಳಿಸಿದ್ದಾರೆ.
ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನೀತರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅರ್ಹರು ಅರ್ಜಿ ಸಲ್ಲಿಸಬಹುದು. ಅರ್ಹ ಸಾಧಕರನ್ನು ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅ.17 ರಂದು ನಡೆಯುವ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿಯನ್ನು ನೀಡಲಾಗುತ್ತದೆ.
ಆಸಕ್ತರು ನಗರದ ವಾಲ್ಮೀಕಿ ಭವನ ಆವರಣದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ನಿಗದಿತ ನಮೂನೆಯ ಅರ್ಜಿ ಪಡೆದು ಭರ್ತಿಮಾಡಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಲ್ಲಚೇರುವು ಪ್ರದೇಶ ಹತ್ತಿರದ ವಾಲ್ಮೀಕಿ ಭವನ ಆವರಣದಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-219190ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.