ಕುರಿ/ಮೇಕೆ ಘಟಕಗಳ ಸಹಾಯಧನಕ್ಕೆ ಅರ್ಜಿ ಆಹ್ವಾನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದವತಿಯಿಂದ ಅನುಷ್ಠಾನಗೊಳ್ಳಲಿರುವ
2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ 10+1 ಕುರಿ / ಮೇಕೆ ಘಟಕಗಳ ವಿತರಣೆಗಾಗಿ ಹಾಗೂ ಸಹಾಯಧನ ಪಡೆಯಲು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

18 ರಿಂದ 60 ವರ್ಷ ವಯೋಮಿತಿ ಇರುವ ಪರಿಶಿಷ್ಟ ಜಾತಿ ಮತ್ತು ವರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನಲ್ಲಿ ತೊಡಗಿಸಿಕೊಂಡ ಅಸಕ್ತ ರೈತರು ಅರ್ಜಿ ಸಲ್ಲಿಸಬಹುದು.

- Advertisement - 

ಬೆಂಗಳೂರು ನಗರ ಜಿಲ್ಲೆಯ ಗ್ರಾಮೀಣ ಭಾಗದ ಜನತೆಗೆ ಗ್ರಾಮೀಣ ಅರ್ಜಿದಾರರು ಆರ್.ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರ ಮತ್ತು ಪ್ರೂಟ್ಸ್ ಐ.ಡಿ ಕಡ್ಡಾಯವಾಗಿ ಹೊಂದಿರಬೇಕು. ಅರ್ಹ ಫಲಾನುಭವಿಗಳನ್ನು ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಫಲಾನುಭವಿಗಳ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುವುದು.

ನಿಗದಿತ ಅರ್ಜಿಯನ್ನು ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಇವರಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಮಾರ್ಚ್ 12 ರ ಸಂಜೆ 5 ಗಂಟೆಯೊಳಗೆ ಕಚೇರಿಗೆ ಸಲ್ಲಿಸಬಹುದು.

- Advertisement - 

ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗಾಗಿ ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Share This Article
error: Content is protected !!
";