ದೈಹಿಕ ಮತ್ತು ಯೋಗ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025-26
ನೇ ಶೈಕ್ಷಣಿಕ ಸಾಲಿನಲ್ಲಿ ಬೆಂಗಳೂರಿನ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ ಅಭ್ಯಸಿಸುತ್ತಿರುವ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೈಹಿಕ ಮತ್ತು ಯೋಗ ಶಿಕ್ಷಕರ (Physical Instructor -cum-Yoga Teacher) ತಾತ್ಕಾಲಿಕ ಪೂರ್ಣಾವಧಿಯ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಎಐಸಿಟಿಇ / ಯುಜಿಸಿ ನಿಯಮಗಳನುಸಾರ ಎಂ.ಪಿಇಡಿ / ಪಿಹೆಚ್.ಡಿ ಮತ್ತು ಯೋಗ ಶಿಕ್ಷಣದಲ್ಲಿ ಕನಿಷ್ಠ ಒಂದು ಸರ್ಟಿಫಿಕೇಟ್ ಕೋರ್ಸ್ ನ ಪ್ರಮಾಣ ಪತ್ರ ಹೊಂದಿರುವ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

- Advertisement - 

ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್‍ಸೈಟ್ www.uvce.karnataka.gov.in ನಿಂದ ಅರ್ಜಿ ಡೌನ್ ಲೋಡ್ ಮಾಡಿಕೊಂಡು ನಿಗಧಿತ ನಮೂನೆಯಲ್ಲಿ ತಮ್ಮ ಅರ್ಜಿಗಳನ್ನು 2 ಸೆಟ್ ಗಳಲ್ಲಿ ಸಂಬಂಧಿತ ದಾಖಲೆಗಳ ಪ್ರತಿಗಳೊಂದಿಗೆ ಕುಲಸಚಿವರು, ಯುವಿಸಿಇ, ಕೆ.ಆರ್ ವೃತ್ತ, ಬೆಂಗಳೂರು- 560 001 ರವರಿಗೆ ಡಿಸೆಂಬರ್ 10 ರ ಒಳಗಾಗಿ ಸಲ್ಲಿಸುವುದು. ನಿಗಧಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕುಲಸಚಿವರು / ಅಧ್ಯಕ್ಷರು, ಯುವಿಸಿಇ ಜಿಮ್ ಖಾನಾ (ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆ) ರವರ ಕಛೇರಿಯನ್ನು ಸಂಪರ್ಕಿಸಬಹುದು.

ಕೊನೆಯ ದಿನಾಂಕದ ನಂತರ ಸ್ವೀಕರಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ವಿಶ್ವವಿದ್ಯಾಲಯವು ಯಾವುದೇ ತಾತ್ಕಾಲಿಕ ನೌಕರರನ್ನು ನೇಮಿಸಿಕೊಳ್ಳದಿರುವ ಹಕ್ಕನ್ನು ಕಾಯ್ದಿರಿಸಿದೆ. ಸಂದರ್ಶನದ ದಿನಾಂಕವನ್ನು ವೆಬ್‍ಸೈಟ್ ನಲ್ಲಿ ತಿಳಿಸಲಾಗುತ್ತದೆ ಅಥವಾ ಅರ್ಹ ಅಭ್ಯರ್ಥಿಗಳಿಗೆ ನೇರವಾಗಿ ತಿಳಿಸಲಾಗುತ್ತದೆ ಎಂದು ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";