ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷಿ ಇಲಾಖೆಯಲ್ಲಿ 2024-25ನೇ ಸಾಲಿನ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ (BTM) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು MSC. Agri /Allied Subject ಪದವಿಯೊಂದಿಗೆ ಕನಿಷ್ಠ 02 ವರ್ಷಗಳ ಕೃಷಿ ಅಥವಾ ಕೃಷಿ ಸಂಬಂದಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರುವವರು ತಮ್ಮ ಬಯೋಡೇಟಾದೊಂದಿಗೆ ಸಂಬಂಧಿತ ದಾಖಲಾತಿಗಳನ್ನು ಡಿಸೆಂಬರ್ 30 ರ ಒಳಗಾಗಿ ಕಛೇರಿಯ ಅವಧಿಯೊಳಗೆ

ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೃಷಿ ಸಂಕೀರ್ಣ, ಎಸ್.ಕರಿಯಪ್ಪ ರಸ್ತೆ (ಕನಕಪುರ ರಸ್ತೆ) ಬನಶಂಕರಿ, ಬೆಂಗಳೂರು-560070 ಈ ವಿಳಾಸಕ್ಕೆ ಸಲ್ಲಿಸುವುದು ಎಂದು ಬೆಂಗಳೂರು ನಗರ ಜಿಲ್ಲೆಯ ಆತ್ಮ ಯೋಜನೆಯ ಯೋಜನಾ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";