ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಸ್ಥಾಪಿಸಿರುವ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯ ಅವಧಿಯು 3 ವರ್ಷಗಳಾಗಿದ್ದು, ಅಧ್ಯಕ್ಷರ ಹುದ್ದೆ ಕನಿಷ್ಠ 40 ವರ್ಷಗಳು ಮತ್ತು ಗರಿಷ್ಠ 65 ವರ್ಷಗಳು ಹಾಗೂ ಸದಸ್ಯರ ಹುದ್ದೆಗೆ ಕನಿಷ್ಠ 35 ವರ್ಷಗಳು ಮತ್ತು ಗರಿಷ್ಠ 60 ವರ್ಷಗಳ ವಯೋಮಿತಿ ಹೊಂದಿರಬೇಕು.

- Advertisement - 

ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಮಕ್ಕಳ ಹಕ್ಕುಗಳ ಪ್ರತಿಪಾದನೆ (Advocacy) ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರಬೇಕು. ಅಧ್ಯಕ್ಷರು ಹಾಗೂ ಸದಸ್ಯರ ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸತಕ್ಕದ್ದು.

ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ4ನೇ ಮಹಡಿ, ಕೃಷಿ ಭವನ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, (ಹಡ್ಸನ್ ವೃತ್ತ), ಬೆಂಗಳೂರು 560002 ಇಲ್ಲಿಗೆ 2026ನೇ ಮಾರ್ಚ್ 09 ಒಳಗಾಗಿ ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು. 

- Advertisement - 

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‍ಸೈಟ್‍ಗಳಾದ  www.kscpcr.karnataka.gov.in ಅಥವಾ www.dwcd.karnataka.gov.in ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

 

Share This Article
error: Content is protected !!
";