ಶಿಕ್ಷಕ, ಆಯಾ ಹುದ್ದೆಗಳಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ತರಗತಿಗಳು (ಎಲ್‍ಕೆಜಿ-ಯುಕೆಜಿ) ಪ್ರಾರಂಭಿಸುತ್ತಿದ್ದು, ಈ ಸಂಬಂಧ ಪ್ರತ್ಯೇಕವಾಗಿ ಅರ್ಹ ಶಿಕ್ಷಕರು ಮತ್ತು ಆಯಾ ಅವರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಪೂರ್ವ ಪ್ರಾಥಮಿಕ ಶಿಕ್ಷಕರಿಗೆ ಕನಿಷ್ಟ ವಿದ್ಯಾರ್ಹತೆ ಇಂತಿದೆ. ಪದವಿಪೂರ್ವ ಶಿಕ್ಷಣದಲ್ಲಿ ಪಿಯುಸಿ ಶೇ.50 ಅಂಕ ಪಡೆದಿರಬೇಕು. ಎನ್‍ಸಿಟಿಇಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಪ್ಲೋಮಾ ಇನ್ ನರ್ಸರಿ ಅಥವಾ ಬಿ.ಇಡಿ (ನರ್ಸರಿ) ಟೀಚರ್ಸ್ ಎಜುಕೇಶನ್/ಫ್ರೀ-ಸ್ಕೂಲ್ ಟೀಚರ್ ಎಜುಕೇಶನ್ ಅಥವಾ ಬಿ.ಡಿ. ನರ್ಸರಿ ಆಗಿರಬೇಕು. ಅಥವಾ ಪೂರ್ವ ಪ್ರಾಥಮಿಕ ಶಿಕ್ಷಕರ ತರಬೇತಿ ಪಡೆದ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಪಿಯುಸಿಯಲ್ಲಿ ಕನಿಷ್ಟ ಶೇ.50 ಅಂಕಗಳು ಪಡೆದಿರಬೇಕು. ಎನ್‍ಸಿಟಿಇ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿ.ಇಡಿ ಆಗಿರಬೇಕು. ಗರಿಷ್ಟ ವಯೋಮಿತಿ 45 ವರ್ಷದೊಳಗಿರಬೇಕು.

- Advertisement - 

ಆಯಾ ಹುದ್ದೆಗೆ ಕನಿಷ್ಟ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು. ಗರಿಷ್ಟ ವಯೋಮಿತಿ 45 ವರ್ಷದೊಳಗಿರಬೇಕು. ಆಸಕ್ತರು ತಮ್ಮ ದಾಖಲೆಗಳೊಂದಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಗಿರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬಡ್ತಿಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರಾಮಗಿರಿ-ಮೊಬೈಲ್ ಸಂಖ್ಯೆ 6363691843 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 

 

Share This Article
error: Content is protected !!
";