ಸರ್ಕಾರದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ಬ್ಯಾಟರಿ ಚಾಲಿತ ವೀಲ್‌ಛೇರ್
, ಶುಲ್ಕ ಮರುಪಾವತಿ, ಪ್ರೋತ್ಸಾಹಧನ ಸೇರಿ ವಿವಿಧ ಸೌಲಭ್ಯ ನೀಡಲು ದೈಹಿಕ ವಿಕಲಚೇತನರಿಂದ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ಆಯಾ ತಾಲ್ಲೂಕು ಪಂಚಾಯಿತಿಗಳಲ್ಲಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ ೩೦ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖಾ ಕಚೇರಿಗೆ ಸಲ್ಲಿಸಬೇಕು.

ಬ್ಯಾಟರಿ ಚಾಲಿತ ವೀಲ್‌ಛೇರ್ ಸೌಲಭ್ಯಕ್ಕಾಗಿ ಶೇ.೭೫ ಮತ್ತು ಅದಕ್ಕಿಂತ ಹೆಚ್ಚಿಗೆ ವಿಕಲತೆ (ಈಗಾಗಲೇ ಇಲಾಖೆ ಮತ್ತು ಇತರೆ ಸಂಘ ಸಂಸ್ಥೆಗಳಿಂದ ಯಂತ್ರಚಾಲಿತ ವಾಹನ ಅಥವಾ ಬ್ಯಾಟರಿ ಚಾಲಿತ ವೀಲ್‌ಛೇರ್ ಪಡೆಯದಿರುವವರು ಅರ್ಹತೆ ಹೊಂದಿರುತ್ತಾರೆ) ಹೊಂದಿರಬೇಕು. 

ಅಲ್ಲದೆ, ಎಸ್.ಎಸ್.ಎಲ್.ಸಿ. ಮತ್ತು ನಂತರದ ವ್ಯಾಸಂಗ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ; Cerebral Palsy, Muscular Dystrophy,  Parkinsons & Multiple Sclerosis    ಅಂಗವಿಕಲತೆ ಹೊಂದಿರುವ ವಿಕಲಚೇತನ ವ್ಯಕ್ತಿಗಳ ಪೋಷಕರು / ಆರೈಕೆದಾರರಿಗೆ ಪ್ರತಿ ಮಾಹೆ ೧೦೦೦ ರೂ.ಗಳ ಪ್ರೋತ್ಸಾಹಧನ ಸೌಲಭ್ಯ ನೀಡಲಾಗುವುದು. 

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ: ೦೮೧೬-೨೦೦೫೦೫೩/ ೨೨೭೦೦೨೯ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ  ತಿಳಿಸಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";