ವಿವಿಧ ತರಬೇತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ರುಡ್‌ಸೆಟ್ ಸಂಸ್ಥೆಯು ಡಿಸೆಂಬರ್ ಎರಡನೇ ವಾರದಲ್ಲಿ ಹಸು ಸಾಕಾಣಿಕೆ (ಹೈನುಗಾರಿಕೆ) ಹಾಗೂ ಎರೆಹುಳು ಗೊಬ್ಬರ ತಯಾರಿಕೆ ಕುರಿತ ೧೦ ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು
, ತರಬೇತಿ ಪಡೆಯಲಿಚ್ಛಿಸುವ ಗ್ರಾಮೀಣ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿದಾರರು ೧೮ ರಿಂದ ೪೫ ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಊಟ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

ಅರ್ಜಿ ಸಲ್ಲಿಸಲು ಡಿಸೆಂಬರ್ ೬ ಕೊನೆಯ ದಿನವಾಗಿದ್ದುಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: ೯೩೮೦೧೬೨೦೪೨, ೯೭೪೦೯೮೨೫೮೫ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";