ಸೂಕ್ಷ್ಮ ಹನಿ ನೀರಾವರಿ ಸೌಲಭ್ಯಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

News Desk

ಸೂಕ್ಷ್ಮ ಹನಿ ನೀರಾವರಿ ಸೌಲಭ್ಯಕ್ಕಾಗಿ ರೈತರಿಂದ ಅರ್ಜಿ ಆಹ್ವಾನ
ಚಂದ್ರವಳ್ಳಿ ನ್ಯೂಸ್, ತುಮಕೂರು: ತೋಟಗಾರಿಕಾ ಇಲಾಖೆಯು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅಡಿಕೆ ಬೆಳೆ ಹೊರತು ಪಡಿಸಿ ೨೦೨೪-೨೫ನೇ ಸಾಲಿಗಾಗಿ ಇತರೆ ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳಲಿಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ರೈತರಿಗೆ ನೀರಿನ ಸಮರ್ಪಕ ಬಳಕೆಯೊಂದಿಗೆ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆದು ಅವರ ಆರ್ಥಿಕ ಮಟ್ಟ ಸುಧಾರಿಸಲು ಸಹಕಾರಿಯಾಗಿದೆ. ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಪ್ರತೀ ಫಲಾನುಭವಿಗೆ ಗರಿ? ೫ ಹೆಕ್ಟೇರ್ ಪ್ರದೇಶ ಹಾಗೂ ತರಕಾರಿ ಮತ್ತು ವಾಣಿಜ್ಯ ಹೂ ಬೆಳೆಗೆ ಗರಿ? ೨ ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುವುದು. ಮೊದಲ ೨ ಹೆಕ್ಟೇರ್ ಪ್ರದೇಶದವರೆಗೆ ಪರಿಶಿ? ಜಾತಿ/ಪರಿಶಿ? ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಶೇ.೯೦ರ? ಹಾಗೂ ನಂತರದ ೩ ಹೆಕ್ಟೇರ್ ಪ್ರದೇಶದವರೆಗೆ ಎಲ್ಲಾ ವರ್ಗದ ರೈತರಿಗೆ ಶೇ. ೪೫ರ? ಸಹಾಯಧನ ನೀಡಲಾಗುವುದು.
ಪರಿಶಿ? ಜಾತಿ ಮತ್ತು ಪರಿಶಿ? ಪಂಗಡದ ರೈತರಿಗೆ ಮಾತ್ರ ಈ ಹಿಂದೆ ಅಳವಡಿಸಿಕೊಂಡಿದ್ದ ಸೂಕ್ಷ್ಮ ನೀರಾವರಿ ಪದ್ದತಿ ಹಾಳಾಗಿದ್ದಲ್ಲಿ / ಘಟಕ ಕಾರ್ಯನಿರ್ವಹಿಸದೇ ಇದ್ದಲ್ಲಿ ೭ ವ?ಗಳ ನಂತರ ಅದೇ ಜಮೀನಿಗೆ ಮತ್ತೊಮ್ಮೆ ಸೂಕ್ಷ್ಮ ನೀರಾವರಿ ಪದ್ದತಿ ಅಳವಡಿಸಿಕೊಂಡಲ್ಲಿ ಈ ಸಹಾಯಧನ ಸೌಲಭ್ಯ ನೀಡಲಾಗುವುದು.
ವಿಕಲಚೇತನರು/ ಪರಿಶಿ? ಜಾತಿ/ಪರಿಶಿ? ಪಂಗಡ/ ಮಹಿಳೆ/ಅಲ್ಪ ಸಂಖ್ಯಾತ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ಸಹಾಯಧನ ಸೌಲಭ್ಯ ಕಲ್ಪಿಸಲಾಗುವುದು. ತೋಟಗಾರಿಕಾ ಇಲಾಖೆಯಿಂದ ಅನುಮೋದನೆಗೊಂಡಿರುವ ಕಂಪನಿಗಳಿಂದ ಮಾತ್ರ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳತಕ್ಕದ್ದು. ಆಸಕ್ತ ರೈತ ಫಲಾನುಭವಿಗಳು ಹತ್ತಿರದ ಗ್ರಾಮ ಪಂಚಾಯಿತಿ/ ತಾಲ್ಲೂಕು ತೋಟಗಾರಿಕೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಮ ಪಂಚಾಯಿತಿ ಅಥವಾ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.ವಾ.ಸಂ.ಯನ್ನು ಸಂಪರ್ಕಿಸಬಹುದಾಗಿದೆ. ಆಸಕ್ತ ರೈತರು ತುಮಕೂರು- ೯೬೮೬೫೦೩೫೦೦, ೮೯೭೦೮೭೦೯೧೮; ಗುಬ್ಬಿ- ೯೫೩೫೭೮೧೯೬೩, ೭೨೫೯೨೪೩೩೨೯; ಶಿರಾ-೯೮೪೪೦೪೨೩೫೬ ; ಕುಣಿಗಲ್-೯೩೪೨೯೫೯೬೯೦ / ೯೯೮೦೦೭೩೯೦೯; ತಿಪಟೂರು-೯೮೪೫೦೧೪೨೯೩ / ೯೯೬೪೭೯೧೯೧೦; ಚಿಕ್ಕನಾಯಕನಹಳ್ಳಿ-೯೬೮೬೦೫೬೭೦೫ / ೯೫೩೮೨೭೨೯೬೪ನ್ನು ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -  - Advertisement - 
Share This Article
error: Content is protected !!
";