ಚಿತ್ರಕಲೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲಲಿತಕಲಾ ಅಕಾಡೆಮಿಯ ವತಿಯಿಂದ ಚಿತ್ರಕಲೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಗಿರಿಜನ ಉಪಯೋಜನೆಯಡಿಯಲ್ಲಿ ಕಲಾ ಶಿಬಿರ, ತರಬೇತಿ ಕಾರ್ಯಾಗಾರ ಹಾಗೂ ಕಮ್ಮಟದಲ್ಲಿ ಪಾಲ್ಗೊಳ್ಳಲು ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕದ ಅಂಗೀಕೃತಗೊಂಡ ವಿದ್ಯಾಸಂಸ್ಥೆಯಲ್ಲಿ ಚಿತ್ರಕಲಾ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿರುವ ಚಿತ್ರಕಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಕರ್ನಾಟಕದವರಾಗಿದ್ದು, ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು.

- Advertisement - 

ಆಸಕ್ತಿಯುಳ್ಳ ವಿದ್ಯಾರ್ಥಿಗಳು ತಮ್ಮ ಪೂರ್ಣ ವಿವರಗಳೊಂದಿಗೆ ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ ಎರಡು ಭಾವಚಿತ್ರ ಹಾಗೂ 5×6 ಅಳತೆಯ 04 ಚಿತ್ರ ಕಲಾಕೃತಿಗಳ ಛಾಯಾಚಿತ್ರಗಳು ಸೇರಿದಂತೆ ಆಗಸ್ಟ್ 20 ರ ಒಳಗಾಗಿ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ತಲುಪಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ಇ-ಮೇಲ್  [email protected] ಹಾಗೂ ದೂರವಾಣಿ ಸಂಖ್ಯೆ: 080-22480297 ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಬಿ. ನೀಲಮ್ಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

 

 

Share This Article
error: Content is protected !!
";