ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಜನರ ಮನೆ, ಮನೆಗೂ ಕುಡಿಯುವ ನೀರು ಹರಿಸುವುದು ನಮ್ಮ ಸಂಕಲ್ಪ” ಎಂದು ಪುಂಗಿಬಿಟ್ಟಿದ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ಏನಾಯ್ತು ಆ ನಿಮ್ಮ ಸಂಕಲ್ಪ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.
ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ನಿವಾಸಿಗಳು ಕಾವೇರಿ ನೀರು ನಮ್ಮ ಮನೆಗಳಿಗೂ ಬರುತ್ತೆ ಎಂದು ಕಳೆದ ಒಂದು ವರ್ಷದಿಂದ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ.
ಅರ್ಜಿ ಸಲ್ಲಿಸಿ, ಶುಲ್ಕವನ್ನೂ ಪಾವತಿಸಿ ವರ್ಷ ಕಳೆದರೂ ಅಲ್ಲಿನ ಮನೆಗಳಿಗೆ ನೀರಿನ ಸಂಪರ್ಕ ಸಿಗುತ್ತಿಲ್ಲ. ಟ್ಯಾಂಕರ್ ಮಾಫಿಯಾ ಅಲ್ಲಿನ ಜನರನ್ನು ಕಿತ್ತು ತಿನ್ನುತ್ತಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.
ಈಗಾಗಲೇ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಹನಿ ನೀರಿಗೂ ಜನ ಹಾಹಾಕಾರ ಪಡುತ್ತಿದ್ದಾರೆ. ನೀರಿನ ಅಭಾವ ಇದ್ದರೆ ಟ್ಯಾಂಕರ್ ಮಾಫಿಯಾ ಮೂಲಕ ಇನ್ನಷ್ಟು ಲೂಟಿ ಹೊಡೆಯುವ ಕುತಂತ್ರವೇ ? ಎಂದು ಜೆಡಿಎಸ್ ಪ್ರಶ್ನಿಸಿದೆ.