ಶುಲ್ಕ ಮರುಪಾವತಿ : ಮಾ.30 ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2023-24
ನೇ ಸಾಲಿನಲ್ಲಿ ಕೆಲ ಸ್ನಾತಕೊತ್ತರ ಹಾಗೂ ವೃತ್ತಿಪರ ಪದವಿ ಕೋರ್ಸ್ಗಳ ಕೌನ್ಸಿಂಗ್ ತಡವಾಗಿ ಪ್ರಾರಂಭವಾಗಿದ್ದರಿಂದ, ಕಳೆದ ಶೈಕ್ಷಣಿಕ ವರ್ಷದ ಫಲಿತಾಂಶ ಹೊರ ಬೀಳುವುದು ತಡವಾಗಿದೆ. ಹಿನ್ನಲೆಯಲ್ಲಿ ಹಿಂದುಳಿದ ವರ್ಗಗಳು ಮತ್ತು ಪ್ರವರ್ಗ1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳ ಶುಲ್ಕ ಮರು ಪಾವತಿ ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್ 30 ವರೆಗೆ ವಿಸ್ತರಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ವೆಬ್ಸೈಟ್ https://ssp.postmatric.karnataka.gov.in/ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಮಾಹಿತಿಗಾಗಿ ವೆಬ್ಸೈಟ್ https://bcwd.karnataka.gov.in ಭೇಟಿ ನೀಡಬಹುದು.

ಇಲಾಖೆ ಸಹಾಯವಾಣಿ 8050770005 ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ 1902ಗೆ ಕರೆ ಮಾಡಬಹುದು. bcwdhelpline@gmail.com ಮತ್ತು postmatrichelp@karnataka.gov.in  ಇಮೇಲ್ ಮಾಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";