ಚಿತ್ರದುರ್ಗ ಜಿಲ್ಲೆಯ ಒಕ್ಕಲಿಗ ಸಮಾಜದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದಿಂದ 2025-2026ನೇ ಸಾಲಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

- Advertisement - 

ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಗಳಾಗಿದ್ದು, ಒಕ್ಕಲಿಗ ಸಮುದಾಯ ಮತ್ತು ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಆಸಕ್ತರು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ, ಅರಿವು ಶೈಕ್ಷಣಿಕ ಸಾಲ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ, ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ

- Advertisement - 

ಸ್ವಯಂ ಉದ್ಯೋಗ ಸಾಲ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್  https://sevasindhu.karnataka.gov.in   ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿದ್ದು,

ಹೆಚ್ಚಿನ ಯೋಜನೆಗಳ ಮಾರ್ಗಸೂಚಿ, ಅಗತ್ಯ ವಿರುವ ಶೈಕ್ಷಣಿಕ ಅರ್ಹತೆ, ವಯೋಮಾನ, ಕುಟುಂಬ ಆದಾಯಮಿತಿ, ಸಹಾಯಧನ ಸೇರಿದಂತೆ ಇತರೆ ಮಾಹಿತಿಗಾಗಿ ನಿಗಮದ ವೆಬ್‌ಸೈಟ್   www.kvcdc.karnataka.gov.in    ನಲ್ಲಿ ಸಂಪರ್ಕಿಸಬಹುದು, ನಿಗಮದ ದೂರವಾಣಿ ಸಂಖ್ಯೆ 08194-220882 ಗೆ ಕರೆ ಮಾಡಿ ವಿಚಾರಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

- Advertisement - 

Share This Article
error: Content is protected !!
";