ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಬ್ಬಂದಿ ಮತ್ತು ನೇಮಕಾತಿ ಆಯೋಗವು ಕೇರಳ–ಕರ್ನಾಟಕ ಪ್ರದೇಶ, ಕೋರಮಂಗಲ, ಬೆಂಗಳೂರು ವತಿಯಿಂದ ಕೇಂದ್ರ ಸರ್ಕಾರದ ವಿವಿಧ ಮಂತ್ರಾಲಯ, ಇಲಾಖೆಗಳಲ್ಲಿ ಕೆಲಸ ನಿರ್ವಹಿಸಲು ಮಲ್ಟಿ ಟಾಸ್ಕಿಂಗ್ ಸ್ಟಾಫ್ (ತಾಂತ್ರಿಕೇತರ) ಹಾಗೂ ಹವಾಲ್ದಾರ್ (ಗ್ರೂಪ್ ಸಿ) ಸುಮಾರು 1075 ಹುದ್ದೆಗಳ ಆಯ್ಕೆಗಾಗಿ ನೇರ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡಲು ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆನ್‍ಲೈನ್ ಅರ್ಜಿಗಳನ್ನು ಸ್ವೀಕರಿಸಲು 2025ರ ಜುಲೈ 27 ಕೊನೆಯ ದಿನಾಂಕವಾಗಿದೆ. ಈ ಸಂಬಂಧ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 24 ರವರೆಗೆ ನಡೆಸಲಾಗುವುದು.
ಅರ್ಜಿ ಸಲ್ಲಿಸಲು ವಯೋಮಿತಿ, ಪರೀಕ್ಷೆಯ ಸ್ವರೂಪ, ಪಠ್ಯಕ್ರಮ, ವಿದ್ಯಾರ್ಹತೆ ಹಾಗೂ ಇನ್ನಿತರ ವಿಷಯಗಳನ್ನು ವೆಬ್‍ಸೈಟ್ https://ssc.gov.in ಹಾಗೂ ಕರ್ನಾಟಕ, ಕೇರಳ, ಲಕ್ಷದ್ವೀಪ
ವೆಬ್‍ಸೈಟ್ www.ssckkr.kar.nic.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರದ ನಿಯಮಗಳನ್ವಯ ಮೀಸಲಾತಿ ಹಾಗೂ ವಯೋಮಿತಿ ಸಡಿಲಿಕೆಯನ್ನು ಪಾಲಿಸಲಾಗುವುದು.
ಹೆಚ್ಚಿನ ವಿವರಗಳಿಗೆ ಸಹಾಯವಾಣಿ ಸಂಖ್ಯೆ 080-25502520 ಗೆ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.