ಸವಿತಾ ಸಮಾಜ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತದಿಂದ 2025-2026ನೇ ಸಾಲಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

- Advertisement - 

ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಗಳಾಗಿದ್ದು, ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಆಸಕ್ತರು, ಸ್ವಯಂ ಉದ್ಯೋಗ ಸಾಲ, ಗಂಗಾ ಕಲ್ಯಾಣ, ಅರಿವು ಶೈಕ್ಷಣಿಕ ಸಾಲ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ, ಸ್ವಾವಲಂಭಿ ಸಾರಥಿ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗೆ ಅರ್ಜಿ ಸಲ್ಲಿಸಬಹುದು.

- Advertisement - 

ಸ್ವಾತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆ  https://www.kaushalkar.com  ಜಾಲತಾಣ ಹಾಗೂ ಉಳಿದ ಯೋಜನೆಗಳಿಗೆ ಸೇವಾಸಿಂಧು ತಂತ್ರಾಂಶ ಪೋರ್ಟ್ಲ್ಮೂ https://sevasindhu.karnataka.gov.in      ಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ಯೋಜನೆಗಳ ಮಾರ್ಗಸೂಚಿ, ಅಗತ್ಯ ವಿರುವ ಶೈಕ್ಷಣಿಕ ಅರ್ಹತೆ, ವಯೋಮಾನ, ಕುಟುಂಬ ಆದಾಯಮಿತಿ,

ಸಹಾಯಧನ ಸೇರಿದಂತೆ ಇತರೆ ಮಾಹಿತಿಗಾಗಿ ನಿಗಮದ ವೆಬ್‌ಸೈಟ್  https://kssd.karnataka.gov.in  ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 080-22374832, 8050770004, 8050770005 ಗೆ ಕರೆ ಮಾಡಬಹುದು ಎಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";