ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಸಾಲ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿಲಾಗಿದೆ.
ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವ ಮನ್ನಡೆ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿದ್ದು, ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ ಅಥವಾ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1,20,000/-ಗಳ ಮಿತಿಯೊಳಗಿರಬೇಕು. ಅರಿವು ಯೋಜನೆಯಡಿ ಅಭ್ಯರ್ಥಿಯ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50/- ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ21 ವರ್ಷಗಳಿಂದ 45 ವರ್ಷಗಳ ಮಿತಿಯಲ್ಲಿರಬೇಕು.
ವಿದೇಶಿ ವ್ಯಾಸಂಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ವಾರ್ಷಿಕ ವರಮಾನವು ರೂ.8 ಲಕ್ಷಗಳ ಮಿತಿಯಲ್ಲಿ ಇರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5%,ತೃತೀಯ ಲಿಂಗಿಗಳಿಗೆ ಶೇ1% ಮೀಸಲಾತಿ ನಿಗದಿ ಮಾಡಲಾಗಿದೆ.
ಯೋಜನೆಗಳಡಿ ಸಹಾಯಧನ/ಸಾಲ–ಸೌಲಭ್ಯವನ್ನು ಪಡೆಯಲು ಇಚ್ಚಿಸುವವರ ಸೇವಾಸಿಂಧು ಪೋರ್ಟಲ್ https://www.kaushalkar.com ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಗಳಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಹಾಗೂ 2024-25ನೇ ಸಾಲಿಗೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಜುಲೈ 2 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ನಿಗಮದ ವೆಬ್‌ಸೈಟ್ https://kvcdcl.karnataka.gov.in ರಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿ ದೂರವಾಣಿ ಸಂಖ್ಯೆ 080-22374848 ಮೊಬೈಲ್ 7899899039 ಕರೆ ಮಾಡಬಹುದು.
ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಮಗದ ಕಛೇರಿಗಳಲ್ಲಿ ಪೂರ್ವಾಹ್ನ10.00ರಿಂದ ಸಂಜೆ5.30ರವರೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.