ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದ ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025-26
ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ವಿವಿಧ ಸಂಸ್ಥೆಗಳಲ್ಲಿನ 39 ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. ದಿನಾಂಕ: 01-07-2025 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳ ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.

ಡಿಪ್ಲೋಮಾ ಕೋರ್ಸ್ಗಾಗಿ ಲಭ್ಯವಿರುವ ಸಂಸ್ಥೆಗಳು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗಬೆಟಗೇರಿ (ಕರ್ನಾಟಕ) 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) 12 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ)-03, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) – 02 ಅಭ್ಯರ್ಥಿಗಳು ಒಟ್ಟು 39 ಆಭ್ಯರ್ಥಿಗಳಿಗೆ ಕೋರ್ಸ್ಗಳು ಲಭ್ಯವಿದೆ.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪೆÇ್ಲೀಮಾ ಸಂಸ್ಥೆಗಳಲ್ಲಿ, ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗಬೆಟಗೇರಿ, ಮೊಬೈಲ್ ಸಂಖ್ಯೆ: 9449162822 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರುಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ಅರ್ಜಿಗಳನ್ನು https://khtigadag.ac.in/AdmissionForm.pdf  ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಂಡು, ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆಪ್ರಾಂಶುಪಾಲರು, ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗಬೆಟಗೇರಿ582102 ಇವರಿಗೆ 2025 ನೇ ಜೂನ್ 15 ರೊಳಗೆ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಆಯುಕ್ತರು ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Share This Article
error: Content is protected !!
";