ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
02 ಉಪ ಮುಖ್ಯ ಕಾನೂನು ನೆರವು ಅಭಿರಕ್ಷಕರ ಹುದ್ದೆ, 05 ಸಹಾಯಕ ಕಾನೂನು ನೆರವು ಅಭಿರಕ್ಷಕರ ಹುದ್ದೆ, 02 ಕಚೇರಿ ಸಹಾಯಕ ಹುದ್ದೆ, 02 ಜವಾನ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲಾಗುವುದು.
ಮುಖ್ಯ ಹಾಗೂ ಸಹಾಯಕ ಕಾನೂನು ನೆರೆವು ಅಭಿರಕ್ಷಕರ ಹುದ್ದೆಗಳ ನೇಮಕಾತಿ ಅವಧಿ 2 ವರ್ಷ ಹಾಗೂ ಕಚೇರಿ ಸಹಾಯಕ ಮತ್ತು ಜವಾನ ಹುದ್ದೆಗಳ ನೇಮಕಾತಿ ಅವಧಿ 6 ತಿಂಗಳು ಮಾತ್ರ. ಅರ್ಜಿ ಸಲ್ಲಿಸಲು ಅಕ್ಟೋಬರ್ 03 ಕೊನೆಯ ದಿನವಾಗಿದೆ.
ಹುದ್ದೆಗಳ ನೇಮಕಾತಿಗೆ ನಿಗದಿ ಪಡಿಸಿದ ವಿದ್ಯಾಭ್ಯಾಸ, ಅನುಭವ, ಅರ್ಜಿ ನಮೂನೆ ಹಾಗೂ ನೇಮಕಾತಿ ವಿವರಗಳು ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.