ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್, ಎಸ್ಎಸ್ಎಫ್ ಪಡೆಗಳಲ್ಲಿ ಕಾನ್ಸ್ಟೇಬಲ್(ಜಿಡಿ) ಮತ್ತು ಅಸ್ಸಾಂ ರೈಫಲ್ಸ್ನಲ್ಲಿ ರೈಫಲ್ ಮ್ಯಾನ್(ಜಿಡಿ) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು .14 ಕೊನೆಯ ದಿನವಾಗಿದೆ.

 ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿA 10ನೇ ತರಗತಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. 18-23 ವರ್ಷ ವಯೋಮಿತಿ ಹೊಂದಿರಬೇಕು.

ಎಸ್.ಸಿ, ಎಸ್.ಟಿ, ಒಬಿಸಿ, ಇಎಸ್ಎಂ ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿಸಡಿಲಿಕೆ ಇರುತ್ತದೆ. ಪರೀಕ್ಷೆಯ ಸಂಭವನೀಯ ದಿನಾಂಕ 2025 ಜನವರಿಫೆಬ್ರವರಿ. ಪರೀಕ್ಷೆಯ ನಿಖರ ದಿನಾಂಕವನ್ನು ಎಸ್ಎಸ್ಸಿ ವೆಬ್ಸ್ಶೆಟ್ ಮೂಲಕ ತಿಳಿಸಲಾಗುವುದು

 ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ಆಯೋಗದ ನೇಮಕಾತಿ ವೆಬ್ಸೈಟ್  www.ssckkr.kar.nic.in/ https://ssc.nic.in     ಗೆ ಬೇಟಿ ನೀಡಬಹುದು.

ಸಿಬ್ಬಂದಿ ಆಯೋಗದ ದೂರವಾಣಿ ಸಂಖ್ಯೆ: 080-25502520, ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

- Advertisement -  - Advertisement - 
Share This Article
error: Content is protected !!
";