ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ರೈತರಿಂದ ಅರ್ಜಿ ಆಹ್ವಾನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
 ‘ಯಂತ್ರಧಾರೆಕೇಂದ್ರಗಳನ್ನು ಮತ್ತಷ್ಟು ಬಲಪಡಿಸಿ ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣಕ್ಕೆ ಉತ್ತೇಜನ ನೀಡಲು ಹಾಗೂ ರೈತರಿಗೆ ಬಾಡಿಗೆ ಆಧಾರದ ಮೇಲೆ ಆಧುನಿಕ ಯಂತ್ರೋಪಕರಣಗಳನ್ನು ಒದಗಿಸುವ ಉದ್ದೇಶದಿಂದ, 2025-26ನೇ ಸಾಲಿನ ಹೈಟೆಕ್ ಹಾರ್ವೆಸ್ಟರ್ ಹಬ್ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.

ವೈಯಕ್ತಿಕವಾಗಿ ರೈತರು, ನೋಂದಾಯಿತ ಸಂಘ-ಸAಸ್ಥೆಗಳು ಹಾಗೂ ರೈತ ಉತ್ಪಾದಕ ಕಂಪನಿಗಳು ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅರ್ಜಿ ಸಲ್ಲಿಸಬಹುದು. ಜಿಲ್ಲೆಯಲ್ಲಿ ವಿಶೇಷವಾಗಿ ಸಾಮಾನ್ಯ ಘಟಕದಡಿ ವೈಯಕ್ತಿಕ ಫಲಾನುಭವಿಗಳಿಗೆ ಎರಡು ಹೆಚ್ಚುವರಿ ಘಟಕಗಳನ್ನು ಸ್ಥಾಪಿಸಲು ಅವಕಾಶ ನೀಡಲಾಗಿದೆ.

- Advertisement - 

ಫಲಾನುಭವಿಗಳು ತಮ್ಮ ಬೆಳೆಗಳ ಕಟಾವು ಮುಗಿದ ನಂತರ, ಈ ಯಂತ್ರಗಳನ್ನು ಇತರ ರೈತರಿಗೆ ಬಾಡಿಗೆಗೆ ನೀಡುವ ಮೂಲಕ ಲಾಭ ಗಳಿಸಬಹುದು. ನಿಗದಿಪಡಿಸಿದ ಗರಿಷ್ಠ ಮೊತ್ತದ ಸಹಾಯಧನವನ್ನು ಕ್ರೆಡಿಟ್ ಲಿಂಕ್ಡ್ ಬ್ಯಾಕ್ ಎಂಡೆಡ್ ಸಬ್ಸಿಡಿಮೂಲಕ ನೀಡಲಾಗುವುದು.

ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸಾಲ ಪಡೆಯುವವರಿಗೆ ಶೇ. 3 ರಷ್ಟು ಬಡ್ಡಿ ರಿಯಾಯಿತಿ ಸೌಲಭ್ಯವೂ ಲಭ್ಯವಿದೆ. ಆಸಕ್ತರು ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 25 ಒಳಗಾಗಿ ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವAತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಮಂಜುನಾಥ ಬಿ. ತಿಳಿಸಿದ್ದಾರೆ.

- Advertisement - 

Share This Article
error: Content is protected !!
";