ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯನ್ನು ಉತ್ತೇಜಿಸುವ ದೃಷ್ಟಿಯಿಂದ 2024-25 ನೇ ಸಾಲಿನ ಗಿರಿಜನ ಉಪಯೋಜನೆಯಡಿಯಲ್ಲಿ ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಅವಧಿಯಲ್ಲಿ
ಕಲಾ ಶಿಬಿರ, ತರಬೇತಿ ಕಾರ್ಯಾಗಾರ / ಕಮ್ಮಟದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲು ನಿರ್ಧರಿಸಿದ್ದು, ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ಶಿಕ್ಷಣಕ್ಕೆ ಸಂಬಂಧಪಟ್ಟ, ವ್ಯಾಸಂಗ ಮಾಡುತ್ತಿರುವ ಚಿತ್ರಕಲಾ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸ ಬಯಸುವ ವಿದ್ಯಾರ್ಥಿಗಳು 18 ವರ್ಷ ಮೇಲ್ಪಟ್ಟಿದ್ದು, ಕರ್ನಾಟಕದವರಾಗಿರಬೇಕು. ಅರ್ಜಿಯನ್ನು ತಮ್ಮ ಪೂರ್ಣ ವಿವರಗಳೊಂದಿಗೆ ಭರ್ತಿ ಮಾಡಿ, ಪಾಸ್ಪೆÇೀರ್ಟ್ ಅಳತೆಯ ಇತ್ತೀಚಿನ ಎರಡು ಭಾವಚಿತ್ರ ಹಾಗೂ 5X6 ಆಳತೆಯ ನಾಲ್ಕು ಚಿತ್ರಕಲಾಕೃತಿಗಳ ಛಾಯಾಚಿತ್ರಗಳನ್ನು ಲಗತ್ತಿಸಿ ನವೆಂಬರ್ 15 ರ ಒಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು–560002 ಇವರಿಗೆ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ಇ–ಮೇಲ್: [email protected] ಅಥವಾ ದೂರವಾಣಿ ಸಂಖ್ಯೆ 080-22480297ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.