ಬಿವಿಎ ಪದವಿ ಪ್ರವೇಶಾತಿಗೆ ಅರ್ಜಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜುಯಲ್ ಆಟ್ರ್ಸ್ (ಬಿ.ವಿ.) (ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಎನ್..ಪಿ. ಪದ್ದತಿ] ದೃಶ್ಯಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ. ಪದವಿ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪದವಿಯಲ್ಲಿ 3ನೇ ಸೆಮಿಸ್ಟರ್ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಷ್ಟುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ htts://uucms.karnataka.gov.in ಅಥವಾ https://www.cavamysore karnataka.gov.in ಅಂತರ್ಜಾಲದ ಮೂಲಕವೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ಸಹಾಯವಾಣಿಗೆ ಕಛೇರಿ ಸಮಯದಲ್ಲಿ 0821-2438931 ಯನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
error: Content is protected !!
";