ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26ನೇ ಸಾಲಿನಲ್ಲಿ ಹಿರಿಯೂರು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಸೀಟುಗಳಿಗೆ ಪ್ರವೇಶಾತಿಯನ್ನು ಬಯಸುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂಸ್ಥೆಗೆ ಹಾಜರಾಗಿ ಮೆರಿಟ್ ಆಧಾರಿತ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ.
ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ನಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅರ್ಜಿ ಮತ್ತು ಆದ್ಯತಾ ಪಟ್ಟಿಯನ್ನು ಸಮೀಪದ ಯಾವುದೇ ಸರ್ಕಾರಿ ಪಾಲಿಟೆಕ್ನಿಕ್ಗಳ ಪ್ರಾಂಶುಪಾಲರಿಗ ಇದೇ ಮೇ.15ರ ಸಂಜೆ 5.30ರೊಳಗೆ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರವೇಶ ವಿಭಾಗ 9900337587, 9482787542 ಗೆ ಸಂಪರ್ಕಿಸಬಹುದು ಎಂದು ಹಿರಿಯೂರು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.