ನೂತನ ಬೆಂಗಳೂರು ನಗರ ಪೊಲೀಸ್ ಕಮಿಷನರ್ ನೇಮಕ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಹಲವು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಕೂಡಲೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಲಾಗಿದೆ.

- Advertisement - 

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಗುರುವಾರ ತಡರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ರಾಜ್ಯದ ಪೊಲೀಸ್ ಇಲಾಖೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನಗರ ಪೊಲೀಸ್ ಆಯುಕ್ತರ ತಲೆದಂಡವಾಗಿದೆ. ಅಲ್ಲದೆ ಅವರ ಜಾಗಕ್ಕೆ ಬೆಂಗಳೂರಿನ 39ನೇ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement - 

ತಡರಾತ್ರಿಯೇ ಅಧಿಕಾರ ಸ್ವೀಕಾರ-
ಬೆಂಗಳೂರಿನ 39ನೇ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರು ಗುರುವಾರ ತಡ ರಾತ್ರಿಯೇ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ತಡರಾತ್ರಿ 12.15ಕ್ಕೆ ಸಹಿ ಮಾಡುವ ಮೂಲಕ ಅಧಿಕಾರ ಸ್ವೀಕರಿಸಿದರು. ನೂತನ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಹೂಗುಚ್ಚ ನೀಡಿ ಸ್ವಾಗತಿಸಿದ್ದಾರೆ.
ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕರಿಸಿದ ಬಳಿಕ ನಗರದ ಅಧಿಕಾರಿಗಳ ಜೊತೆ ಕಮಿಷನರ್​ ಕಿರು ಸಭೆ ನಡೆಸಿದರು.

- Advertisement - 

ಕಠಿಣ ಪರಿಸ್ಥಿತಿ-
ನೂತನ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿ
, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಆದೇಶದ ಮೇಲೆ ಅಧಿಕಾರ ಸ್ವೀಕರಿಸಿದ್ದೀನೆ. ಇಂಥಹ ಕಠಿಣ ಪರಿಸ್ಥಿತಿಯಲ್ಲೂ ಕೂಡ ಅಧಿಕಾರ ಸ್ವೀಕರಿಸಿದ್ದು, ಹಿಂದಿನ ಕಮಿಷನರ್ ಉತ್ತಮ ಕೆಲಸ ಮಾಡಿದ್ದಾರೆ. ಅದನ್ನ ಮುಂದುವರೆಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು.

ಈ ಹಿಂದೆ ಇದೇ ಕಚೇರಿಯಲ್ಲಿ ನಾನು ಕೂಡ ಕೆಲಸ ಮಾಡಿದ್ದೆ. ಈಗ ಸಮಯ ಬೇರೆ ರೀತಿಯೇ ಇದೆ. ಕಾಲ್ತುಳಿತ ಪ್ರಕರಣದ ಬಗ್ಗೆ ಈಗಲೇ ನಾನು ಏನು ಪ್ರತಿಕ್ರಿಯೆ ನೀಡಲ್ಲ. ಅಧಿಕಾರಿಗಳೊಂದಿಗೆ ಸಭೆ ಮಾಡಿ ಅನಂತರ ಪ್ರತಿಕ್ರಿಯಿಸುತ್ತೇನೆ ಎಂದು ನೂತನ ಪೊಲೀಸ್ ಆಯುಕ್ತರು ಹೇಳಿದ್ದಾರೆ.
ಅಧಿಕಾರಿ ಅಮಾನತು-

ರಾಜ್ಯ ಪೊಲೀಸ್ ಇಲಾಖೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಅಧಿಕಾರಿಯೊಬ್ಬರ ಅಮಾನತು ಆಗಿದೆ. ಆ ಹುದ್ದೆಯಲ್ಲಿ ಬಿ ದಯಾನಂದ್ ಅವರ ಮುಂಬಡ್ತಿಗೂ ಅಮಾನತು ಆದೇಶದದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಹಾಗೂ ಇತರರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಒಂದೇ ಪ್ರಕರಣದಲ್ಲಿ ಪೊಲೀಸ್ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತರು ಅಮಾನತುಗೊಂಡಿರುವುದು ಇದೇ ಮೊದಲಾಗಿದೆ.

ದಕ್ಷವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಯುಕ್ತ ಬಿ ದಯಾನಂದ್ ಅವರ ಅಮಾನತಿಗೆ ಪ್ರತಿಪಕ್ಷಗಳ ನಾಯಕರು ಅಷ್ಟೇ ಅಲ್ಲದೆ ಸಾರ್ವಜನಿಕ ವಲಯದಿಂದ, ಸೋಷಿಯಲ್ ಮೀಡಿಯಾದಲ್ಲಿ ರಾಜ್ಯ ಸರ್ಕಾರ ವಿರುದ್ಧ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಸರ್ಕಾರದ ಪ್ರಚಾರ ಗೀಳಿನಿಂದಾದ ಆಚಾತುರ್ಯಕ್ಕೆ ಒಬ್ಬ ಪ್ರಾಮಾಣಿಕ, ದಕ್ಷ ಅಧಿಕಾರಿಗೆ ಅಮಾನತ್ತು ಮಾಡಲಾಗಿದೆ ಎಂದು ಸಾರ್ವಜನಿಕರು ಟೀಕಾಪ್ರಹಾರ ಮಾಡುತ್ತಿದ್ದಾರೆ.

Share This Article
error: Content is protected !!
";