ಕನಕಪುರ ಮೆಡಿಕಲ್‌ಕಾಲೇಜಿಗೆ ಅನುಮೋದನೆ-ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತದ ಪ್ರಪ್ರಥಮ ಎಐ ಸಿಟಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಗ್ರೇಟರ್ ಬೆಂಗಳೂರು ಇನ್ನೋವೇಶನ್ ಆ್ಯಂಡ್ ಟೆಕ್ ಸಿಟಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚಾಲನೆ ನೀಡಜಿದರು.

ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರು ಚಾಲನೆ ನೀಡಿ, ಮಾತನಾಡಿದರು.
ನಡೆದ ಸಚಿವ ಸಂಪುಟ ಸಭೆಯಲ್ಲಿ ಕನಕಪುರ ಮೆಡಿಕಲ್‌ಕಾಲೇಜಿಗೆ ಅನುಮೋದನೆ ದೊರಕಿದೆ. ಈ ಹಿಂದೆ ಬಿಜೆಪಿ ಹಾಗೂ ಜೆಡಿಎಸ್‌ನಾಯಕರು ನಮ್ಮ ಕಾಲೇಜು ನೀವು ತೆಗೆದುಕೊಂಡು ಹೋಗ್ತಿದ್ದೀರಿ ಎಂದು ಧರಣಿ ಮಾಡಿದ್ದರು. ಆಗ ನೀವು ಏನ್‌ಬೇಕಾದ್ರೂ ಟೀಕೆ ಮಾಡಿ
,

- Advertisement - 

ರಾಮನಗರ ಹಾಗೂ ಕನಕಪುರದಲ್ಲಿ ಮೆಡಿಕಲ್‌ಕಾಲೇಜು ಮಾಡ್ತೀನಿ ಎಂದು ಹೇಳಿದ್ದೆ. ಅದರಂತೆ ಈಗ ಕನಕಪುರ ಮೆಡಿಕಲ್‌ಕಾಲೇಜಿಗೆ ಹೌಸಿಂಗ್‌ಬೋರ್ಡ್‌ನಿಂದ 25 ಎಕರೆ ಜಮೀನಿಗೆ 60 ಕೋಟಿ ರೂಪಾಯಿ ಮೀಸಲಿಡಲಿಕ್ಕೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈಗಾಗಲೇ ರಾಮನಗರ ಮೆಡಿಕಲ್‌ಕಾಲೇಜು ಕೆಲಸ ನಡೆಯುತ್ತಿದ್ದು, ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತಿದ್ದೇವೆ ಎಂದು ಡಿಸಿಎಂ ಹೇಳಿದರು.

2006ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ರಾಮನಗರ, ಸೋಲೂರು, ಸಾತನೂರು, ಬಿಡದಿ ಸೇರಿದಂತೆ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ನಿರ್ಮಾಣ ಮಾಡಲು ಹೊರಟು, ಗ್ಲೋಬಲ್‌ಟೆಂಡರ್‌ಸಹ ಕರೆದಿದ್ದರು. ಗ್ರೇಟರ್‌ಬೆಂಗಳೂರು ಇಂಟಿಗ್ರೇಟೆಡ್‌ಟೌನ್‌ಶಿಪ್ ಮಾಡಲು ನಾವು ಬಯಸಿದ್ದೇವೆ.

- Advertisement - 

ಬಿಡದಿ ಟೌನ್‌ಶಿಪ್ ಯೋಜನೆ ಒಮ್ಮೆ ನೋಟಿಫಿಕೇಷನ್‌ಆದ್ಮೇಲೆ ಮತ್ತೆ ಡಿನೋಟಿಫೈ ಮಾಡಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ. ನಮ್ಮ ಉದ್ದೇಶ ಒಂದೇ, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಯಾಗಬೇಕು. ಆಸ್ತಿ ಮೌಲ್ಯ ಹೆಚ್ಚಾಗಬೇಕು. ಆಸ್ಪತ್ರೆ, ಕೈಗಾರಿಕೆ, ಎಐ ಎಲ್ಲವೂ ನಮ್ಮ ಜಿಲ್ಲೆಗೆ ಬರಬೇಕು. ಎಐ ಸಿಟಿಯಾಗಿ ನಮ್ಮ ನಗರ ಬೆಳೆಯಬೇಕು. ಮುಂದಿನ ದಿನಗಳಲ್ಲಿ ಮೆಟ್ರೋ ಕೂಡ ಇಲ್ಲಿಗೆ ಬರಬೇಕು ಎನ್ನುವುದು.

ನಮ್ಮ ಜಿಲ್ಲೆಯ ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದ್ರು, ಮಾಗಡಿ ಕೆಂಪೇಗೌಡರು ಬೆಂಗಳೂರು ಕಟ್ಟಿದ್ರು. ಕೆಂಪೇಗೌಡರು ಬೆಂಗಳೂರು ನಗರ ಇಷ್ಟು ಬೆಳೆಯುತ್ತೆ ಎಂದು ಯೋಚಿಸಿರಲಿಲ್ಲ. ಪ್ರತಿದಿನ 75 ಲಕ್ಷ ಜನ ಹೊರಗಿನಿಂದ ಬಂದು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ.  ನಮ್ಮ ನಗರದ ಜನರಿಗೆ ಮೊದಲು ಕೆಲಸ ಸಿಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.

 

Share This Article
error: Content is protected !!
";