ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾಗಿದ್ದಾರೆ.
ಯೋಧರ ಸಾವಿನ ಸುದ್ದಿ ಕೇಳಿ ತುಂಬಾ ನೋವಾಯಿತು ಎಂದು ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದ್ದಾರೆ.
ಯೋಧರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರಣಿಸಲಿ ಎಂದು ಹೆಚ್ ಡಿಕೆ ಪ್ರಾರ್ಥಿಸಿದ್ದಾರೆ.