ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾಂಗ್ರೆಸ್ ಯುವ, ವಿದ್ಯಾರ್ಥಿ ಘಟಕದಲ್ಲಿ ಒಂದು ದಶಕದ ಕಾಲ ಕಾರ್ಯಕರ್ತೆಯಾಗಿ ಪಕ್ಷ ಸಂಘಟನೆಯಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಚಿತ್ರದುರ್ಗ ನಗರದ ಎಂಎಸ್ಸಿ ಪದವೀಧರೆ ಎಂ.ಸಿ.ಅರ್ಪಿತಾ ಅವರನ್ನು ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಜಿಲ್ಲಾಧ್ಯಕ್ಷೆ ಗೀತಾನಂದಿನಿ ಗೌಡ ನೇಮಕ ಮಾಡಿ ಆದೇಶಿಸಿದ್ದಾರೆ.
ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಸೇರಿ ಎಲ್ಲ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಲು ಸಂಘಟನೆ ಕಾರ್ಯಕೈಗೊಳ್ಳುವಂತೆ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಅರ್ಪಿತಾ ಅವರ ಪಕ್ಷನಿಷ್ಠೆ ಹಾಗೂ ಯುವ, ವಿದ್ಯಾರ್ಥಿ ಕಾಂಗ್ರೆಸ್ ಘಟಕದಲ್ಲಿ ಸಂಘಟನಾ ಸಾಮರ್ಥ್ಯ ಪರಿಗಣಿಸಿ ಅವರಿಗೆ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸುವಂತೆ ಮಾಜಿ ಸಚಿವ ಎಚ್.ಆಂಜನೇಯ, ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್ ಶಿಫಾರಸ್ಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಾತಿ ಮಾಡಿ ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.