24 ಪಾಕ್ ಮತ್ತು 159 ಬಾಂಗ್ಲಾದೇಶದವರ ಬಂಧನ : ಗೃಹ ಸಚಿವ ಪರಮೇಶ್ವರ್

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ/ಬೆಂಗಳೂರು:
ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರ ಮತ್ತು ರಾಜ್ಯದಲ್ಲಿ ಅಧಿಕೃತವಾಗಿ ವಾಸವಿದ್ದ 24 ಪಾಕ್ ಮತ್ತು 159 ಬಾಂಗ್ಲಾದೇಶ ಮೂಲದವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಿ.ಎಸ್.ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯಕ್ಕೆ ಪದೇ ಪ್ರವೇಶಿಸುವ ಇಂತಹ ಪ್ರಕರಣ ಬಗ್ಗೆ ನಿಗಾವಹಿಸಲು ಬೆಂಗಳೂರು ನಗರದಲ್ಲಿ ನಗರ ವಿಶೇಷ ಘಟಕವಿದ್ದು, ನಗರಕ್ಕೆ ಪ್ರವೇಶಿಸುವ ಯಾವುದೇ ವಿದೇಶಿಯರ ಬಗ್ಗೆ,

ಪೊಲೀಸ್ ಠಾಣೆಗಳ ಮೂಲಕ ಎಫ್.ಆರ್. ಆರ್.ಆರ್.,ಬೆಂಗಳೂರು ರವರಿಂದ ಮಾಹಿತಿಯನ್ನು ಪಡೆದು, ಪ್ರತಿ ವಿಭಾಗೀಯ ಡಿಸಿಪಿಗಳ ಮುಖಾಂತರ ವಿಶೇಷ ಕಾರ್ಯಾಚರಣೆಯನ್ನು ಮಾಡಲಾಗುತ್ತಿರುತ್ತದೆ.

ಅಲ್ಲದೆ, ಸಿ.ಸಿ.ಬಿಯ ಸಂಘಟಿತ ಅಪರಾಧ ದಳ ಕೂಡ ಕಾರ್ಯಾಚರಣೆ ನಡೆಸುತ್ತಿರುತ್ತದೆ. ಇತರ ನಗರ / ಜಿಲ್ಲೆಗಳಲ್ಲಿ ಅನಧಿಕೃತವಾಗಿ ಪ್ರವೇಶಿಸುವ ವಿದೇಶಿಯರುಗಳ ಪತ್ತೆಯ ಬಗ್ಗೆ ವಿಶೇಷ ಕಾರ್ಯನಿರ್ವಹಿಸುತ್ತಿರುತ್ತದೆ ಎಂದು ತಿಳಿಸಿದರು.

 

 

- Advertisement -  - Advertisement - 
Share This Article
error: Content is protected !!
";