ಡ್ರಗ್ಸ್ ಪ್ರಕರಣದ 4 ಆರೋಪಿಗಳ ಬಂಧನ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ನಗರದ ವಿದ್ಯಾನಗರ ಠಾಣೆ ಪೊಲೀಸರು ಇತ್ತೀಚೆಗೆ ನಡೆದ 290 ಗ್ರಾಂ ಡ್ರಗ್ಸ್ ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳನ್ನು ಬಂಧಿಸುವ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ದಾವಣಗೆರೆ ಎಸ್​​ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಳೆದ ಡಿಸೆಂಬರ್​ 22ರಂದು ಸೋಮವಾರ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಮೇಲೆ ವಿದ್ಯಾನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದರು.

- Advertisement - 

ಈ ವೇಳೆ, ಕಾಂಗ್ರೆಸ್ ಮುಖಂಡ ವೇದಮೂರ್ತಿ ಎಸ್.ಜಿ(53) ಸೇರಿದಂತೆ, ರಾಜಸ್ಥಾನ ಮೂಲದ ರಾಮ್ ಸ್ವರೂಪ್ (33), ಧೋಲಾರಾಮ್ (36) ಹಾಗೂ ದೇವ್ ಕಿಶನ್ (35) ಎಂಬವರನ್ನು ಬಂಧಿಸಲಾಗಿತ್ತು.

ಬಂಧಿತರಿಂದ ಎಂಡಿಎಂಎ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್​ ಸೇರಿ ಲಕ್ಷಾಂತರ ಮೌಲ್ಯದ 290 ಗ್ರಾಂ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
ಈಗ ಅನ್ವರ್ ಭಾಷಾ
, ಪಾರಸ್, ಕೃಷ್ಣಮೂರ್ತಿ ಹಾಗೂ ಧೋನಿ ಅಲಿಯಾಸ್ ಮಂಜುನಾಥ್ ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

- Advertisement - 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು, ಪ್ರಕರಣ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿ, ಸದರಿ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನವಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 8ಕ್ಕೆ ಏರಿಕೆ ಆಗಿದೆ. ಈಗ ಬಂಧಿತರಾದವರು ಈ ಹಿಂದೆ ಬಂಧಿಸಲ್ಪಟ್ಟವರಿಂದ ಡ್ರಗ್ಸ್​ ಖರೀದಿಸುತ್ತಿದ್ದರು. ಅಲ್ಲದೆ, ಇವರು ಡ್ರಗ್ಸ್​ ಸೇವನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬಂಧಿತ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆ ಮುಂದುವರೆದಿದೆ. ಡ್ರಗ್ಸ್​ ವಿರುದ್ಧ ದಾವಣಗೆರೆಯಲ್ಲಿ ಪೊಲೀಸರ ಕಾರ್ಯಾಚರಣೆ ಮುಂದುವರೆಯಲಿದೆ. ಅದರಲ್ಲೂ ಹೊಸ ವರ್ಷಾಚರಣೆ ಸಂದರ್ಭ ಇರುವುದರಿಂದ ಸಾರ್ವಜನಿಕರಿಗೆ ಎಲ್ಲಿಯಾದರೂ ಡ್ರಗ್ಸ್​ ಮಾರಾಟ, ಸೇವನೆ ಬಗ್ಗೆ ಗೊತ್ತಾದರೆ ಸಿಕ್ಕರೆ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಎಸ್​ಪಿ ಉಮಾ ತಿಳಿಸಿದರು.

ಸಚಿವ ಬೈರತಿ ಪ್ರತಿಕ್ರಿಯೆ:
ದಾವಣಗೆರೆಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವ ಬೈರತಿ ಸುರೇಶ್ ಪ್ರಕರಣದ ಕುರಿತಂತೆ ಆರೋಪಿಗಳದ್ದು ಸಚಿವರುಗಳ ಜೊತೆ ಫೋಟೋ ಇದ್ದರೆ ಅವರು ಆಪ್ತರಾಗುತ್ತಾರಾ
? ನಾನು ಕೂಡ ಸಾಕಷ್ಟು ಕಾರ್ಯಕ್ರಮಗಳಿಗೆ ಹೋಗುತ್ತೇನೆ. ಆಗ ನಮ್ಮ ಜೊತೆ ಸಾಕಷ್ಟು ಜನರು ಫೋಟೋ ತೆಗೆಸಿಕೊಳ್ಳುತ್ತಾರೆ. ಹಾಗಾದರೆ ಅವರು ನನ್ನ ಆಪ್ತರಾಗುತ್ತಾರಾ? ಎಂದು ಸಚಿವರು ಪ್ರಶ್ನಿಸಿದರು.

ಏನಿದು ಪ್ರಕರಣ:
ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜೆ.ಹೆಚ್. ಪಟೇಲ್ ಬಡಾವಣೆಯ ಉದ್ಯಾನವನದಲ್ಲಿ ಕಳೆದ ಡಿ.
22ರ ಮಧ್ಯಾಹ್ನ ನಾಲ್ವರು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಬಂದಿತ್ತು. ಬಳಿಕ ದಾಳಿ ನಡೆಸಿದ ಪೊಲೀಸರು, ನಾಲ್ವರನ್ನು ಬಂಧಿಸಿ, 10 ಲಕ್ಷ ರೂ. ಮೌಲ್ಯದ 90 ಗ್ರಾಂ ಎಂಡಿಎಂಎ ಹಾಗೂ 200 ಗ್ರಾಂ ಒಪಿಯಂ ಎಂಬ ದುಬಾರಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದರು.

ಅಲ್ಲದೆ, 1 ಲಕ್ಷ ರೂ. ನಗದು ಸೇರಿದಂತೆ 11 ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಸ್ಪಿ ಉಮಾಪ್ರಶಾಂತ್ ತಿಳಿಸಿದ್ದರು. ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

Share This Article
error: Content is protected !!
";