ಹಿಂದುಗಳ ಹೆಸರಿಟ್ಟುಕೊಂಡು ನೆಲೆಸಿದ್ದ ಮುಸ್ಲಿಂ ಕುಟುಂಬ ಬಂಧನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ರಾಜಧಾನಿ ಸೇರಿದಂತೆ ರಾಜ್ಯದ ಹಲವು ಆಯಕಟ್ಟಿನ ಪ್ರದೇಶಗಳು ವಲಸಿಗರ ರಾಜಧಾನಿಯಾಗಿ ಮಾರ್ಪಟ್ಟಿದೆ.

ಭಯೋತ್ಪಾದಕರು, ಸಮಾಜಘಾತುಕ ಶಕ್ತಿಗಳು, ಪಾಕಿಸ್ತಾನಿಗಳು, ಬಾಂಗ್ಲಾ ದೇಶಿಯರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸುತ್ತಿದ್ದು ಹೊಸ ಬೆಳವಣಿಗೆ ಎಂದರೆ ಮುಸ್ಲಿಂ ಕುಟುಂಬವೊಂದು ಹಿಂದೂ ಹೆಸರಿನಲ್ಲಿ ನೆಲೆಯೂರಿದ್ದು ಪೊಲೀಸರು ಕಾರ್ಯಾಚರಣೆ ಮಾಡಿ ಮುಸ್ಲಿಂ ಕುಟುಂಬವನ್ನು ಬಂಧಿಸಿದ್ದಾರೆ.

ರಾಜ್ಯದಲ್ಲಿ ಹಿಂದೂಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ದಾವಣಗೆರೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮೂಲದ ಫಾತಿಮಾ ಅಲ್ತಾಫ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಉಳಿದಂತೆ, ಮೊಹಮ್ಮದ್ ಹನೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹನೀಫ್ ಕೂಡ ಪಾಕಿಸ್ತಾನದವನಾಗಿದ್ದು ಹನೀಫ್ ಸೊಸೆ, ಮಗಳು, ಅಳಿಯನನ್ನೂ ಬಂಧಿಸಲಾಗಿದೆ.

ರಶೀದ್ ಅಲಿ ಸಿದ್ದಿಕಿ ಎಂಬಾತನ ಮಾವ ಮೊಹಮ್ಮದ್ ಹನೀಫ್ ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಪ್ರಮುಖ ಆರೋಪಿಯಾಗಿದ್ದಾನೆ.

ಸಿದ್ದಿಕಿ ಮೊಹಮ್ಮದ್ ಯಾಸಿನ್ (ಪುತ್ರ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಇವರನ್ನು ಪೊಲೀಸರು ಬಂಧಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";