ಸ್ವೀಟ್ ಅಂಗಡಿಯಲ್ಲಿ ಗೋಮಾಸಂ ಮಾರಾಟ ಆರೋಪಿಗಳ ಬಂಧನ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಮಾಸುವ ಮುನ್ನವೇ ದುಷ್ಕರ್ಮಿಗಳು ಇದರ ಮಧ್ಯೆ ಮೂಡಿಗೆರೆ ತಾಲೂಕಿನ ಬಣಕಲ್‌ಗ್ರಾಮದ ಮಾರ್ಕೆಟ್​​ನಲ್ಲಿ ಸ್ವೀಟ್ ಅಂಗಡಿ ಹಾಕಿಕೊಂಡು ಗೋಮಾಂಸ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಬಂಧಿತ ಇಬ್ಬರು ಆರೋಪಿಗಳು ಅಸ್ಸಾಂನಿಂದ ಬಂದು ಬಣಕಲ್‌ಗ್ರಾಮದ ಸಂತೆಯಲ್ಲಿ ಸ್ವೀಟ್ ಅಂಗಡಿ ಜೊತೆಗೆ ಗೋಮಾಂಸ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಅಕ್ರಮ ಬಾಂಗ್ಲಾದೇಶದ ನಿವಾಸಿಗಳು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ವೀಟ್ ಡಬ್ಬದ ಪಕ್ಕದಲ್ಲಿರುವ ಬ್ಲ್ಯಾಕ್​ ಬ್ಯಾಗ್​ನಲ್ಲಿ ಗೋಮಾಂಸ ಪತ್ತೆಯಾಗಿದ್ದು, ಗೋಮಾಂಸ ಸಮೇತ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳ ಪಡಿಸಿದ್ದಾರೆ.

- Advertisement -  - Advertisement - 
Share This Article
error: Content is protected !!
";