ಪುಡಿ ರೌಡಿಗಳಂತೆ ವರ್ತಿಸಿರುವ ಕಾಂಗ್ರೆಸ್ ಮುಖಂಡನ ಬಂಧಿಸಿ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯವನ್ನು ಗೂಂಡಾರಾಜ್ಯವನ್ನಾಗಿ ಪರಿವರ್ತಿಸಿರುವ ಈ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಕಾಂಗ್ರೆಸ್ ಮುಖಂಡರುಗಳು ಇದಕ್ಕೆ ತಕ್ಕಂತೆ ಪುಡಿರೌಡಿಗಳಂತೆ ವರ್ತಿಸುತ್ತಿರುವುದು ಆ ಪಕ್ಷದ ಸಂಸ್ಕೃತಿಗೆ ಕನ್ನಡಿ ಹಿಡಿದಿದೆ. ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ನಿಯಮಬಾಹಿರವಾಗಿ ಕೃತ್ಯ ಎಸಗಿರುವುದು ಮಾತ್ರವಲ್ಲದೆ ಒಬ್ಬ ಕರ್ತವ್ಯ ನಿರತ ಮಹಿಳಾ ಅಧಿಕಾರಿಯ ಮೇಲೆ ಹೀಗೆ ಅಸಭ್ಯ ಪುಂಡನಂತೆ ವರ್ತಿಸುತ್ತಿರುವುದು ಅಕ್ಷಮ್ಯ ಎಂದು ಅವರು ಟೀಕಿಸಿದ್ದಾರೆ.

- Advertisement - 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮದೇ ಪಕ್ಷದ ಈ ಮುಖಂಡನ ಈ ಗೂಂಡಾ ವರ್ತನೆಗೂ ಕೂಡ ಬಳ್ಳಾರಿಯ ಪ್ರಕರಣದಲ್ಲಿ ವಹಿಸಿದಂತೆ ಇದಕ್ಕೂ ನಿಮ್ಮ ಮೌನಸಮ್ಮತಿ ಇದೆಯೇ? ಅಥವಾ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆದೇಶಿಸುತ್ತೀರಾ? ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರನ್ನಂತೂ ಕೇಳುವಂತೆಯೇ ಇಲ್ಲ. ಅವರ ಬಳಿ ಮಾಹಿತಿ ಇರುವುದೇ ಇಲ್ಲ. ಪೊಲೀಸ್ ಇಲಾಖೆಯ ಕೈಕಟ್ಟಿ ಹಾಕಿ, ಗೂಂಡಾಗಳಿಗೆ ರಕ್ಷಣೆ ನೀಡುತ್ತಿರುವುದೇ ನಿಮ್ಮ ಸಾಧನೆಯೇ? ಎಂದು ವಿಜಯೇಂದ್ರ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಅಧಿಕಾರ ಮದದಿಂದ ಜನಸಾಮಾನ್ಯರ, ಪ್ರಾಮಾಣಿಕ ಅಧಿಕಾರಿಗಳ ಮೇಲೆ ದರ್ಪ ತೋರಿಸುವುದನ್ನು ನೋಡಿಕೊಂಡು ಪಕ್ಷ ಸುಮ್ಮನಿರಲಾಗದು. ಒಬ್ಬ ಮಹಿಳಾ ಅಧಿಕಾರಿ ವಿರುದ್ಧ ದಬ್ಬಾಳಿಕೆ ನಡೆಸುವ ಇಂತಹ ಅಶಿಸ್ತಿನ ನಾಯಕರ ವಿರುದ್ಧ ರಾಜ್ಯ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಜನರೇ ರಸ್ತೆಗಿಳಿದು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.

- Advertisement - 

 

 

 

Share This Article
error: Content is protected !!
";