ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರನ್ನು ಕಸ್ಟಮ್ಸ್ ಹಾಗೂ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ 11 ಕೋಟಿ ರೂ. ವಸೂಲಿ ಮಾಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಕಸ್ಟಮ್ಸ್ ಹಾಗೂ ಇ.ಡಿ ಅಧಿಕಾರಿಗಳೆಂದು ಬೆದರಿಸಿ ಹಣ ಸುಲಿಗೆ ಮಾಡಿದ್ದ ಆರೋಪಿಗಳಾದ ಕರಣ್, ತರುಣ್ ನಟಾನಿ ಹಾಗೂ ಧವಲ್ ಶಾ ಇವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಟೆಕ್ಕಿಯೊಬ್ಬರಿಗೆ ಬೆದರಿಸಿ ಒಂದು ತಿಂಗಳ ಅವಧಿಯಲ್ಲಿ ವಿವಿಧ ಖಾತೆಗಳಿಗೆ 11 ಕೋಟಿ ರೂ. ಹಣವನ್ನು ವರ್ಗಾಯಿಸಿಕೊಂಡಿದ್ದರು. ಹಣ ಕಳೆದುಕೊಂಡಿದ್ದ ಸಂತ್ರಸ್ತ ಟೆಕ್ಕಿ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ತೀವ್ರ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

