ಶಂಕಿತ ಮೂವರು ಉಗ್ರರ ಬಂಧನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಗ್ರರಿಗೆ ನೆರವು ನೀಡಿದ ಆರೋಪದಡಿ ಬೆಂಗಳೂರು ಹಾಗೂ ಕೋಲಾರದಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿ
ಶಂಕಿತ ಮೂವರು ಉಗ್ರರನ್ನ ಬಂಧಿಸಿದ್ದಾರೆ.

ಬಂಧಿತ ಮನೋವೈದ್ಯ ನಾಗರಾಜ್‌, ಚಾಂದ್ ಪಾಷಾ ಹಾಗೂ ಅನೀಸ್ ಫಾತೀಮಾಳನ್ನು 6 ದಿನಗಳ ಕಾಲ ಎನ್​ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ
NIA ವಿಶೇಷ ಕೋರ್ಟ್ ಜುಲೈ 14ರವರೆಗೆ ಕಸ್ಟಡಿಗೆ ನೀಡಿ ಆದೇಶಿಸಿದ್ದು, ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ತನಿಖೆ ಇನ್ನಷ್ಟು ತೀವ್ರಗೊಳಿಸಲಿದ್ದಾರೆ.

- Advertisement - 

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ನಾಗರಾಜ್, ಎಎಸ್​ಐ ಚಾಂದ್ ಪಾಷಾ ಮತ್ತು ಶಂಕಿತ ಉಗ್ರನ ತಾಯಿ ಫಾತೀಮಾಳನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದರು. ಇವರೆಲ್ಲರೂ ದಕ್ಷಿಣ ಭಾರತದ ಹಲವು ಸ್ಫೋಟಗಳ ಮಾಸ್ಟರ್‌ ಮೈಂಡ್ ನಾಸೀರ್‌ ಜೊತೆ ಸಂಪರ್ಕ ಹೊಂದಿದ್ದರೆಂಬ ಸುಳಿವು ಸಿಕ್ಕಿದ್ದು, ಈ ಸಂಬಂಧ ಎನ್​ಐಎ, ಕೋರ್ಟ್​  ಅನುಮತಿ ಮೇರೆಗೆ ವಶಕ್ಕೆ ಪಡೆದುಕೊಂಡು ಹೆಚ್ಚಿನ ತನಿಖೆ ನಡೆಸಲಿದ್ದಾರೆ.

ಉಗ್ರ ನಾಸೀರ್, ಕೊಲೆ ಕೇಸ್​​ನಲ್ಲಿ ಶಾಮೀಲಾಗಿದ್ದ ಯುವಕರ ತಂಡ ಕಟ್ಟಿದ್ದ. ಜುನೈದ್, ಮೊಹಮ್ಮದ್ ಹರ್ಷದ್ ಖಾನ್, ಸುಹೈಲ್, ಫೈಜಲ್, ಜಾಹಿದ್ ತಬ್ರೇಜ್, ಮುದಾಸಿರ್ ಇರುವ ತಂಡ ರೆಡಿ ಮಾಡಿದ್ದ.

- Advertisement - 

ಈ ತಂಡ ಗ್ರೆನೇಡ್, ಪಿಸ್ತೂಲ್, ಸ್ಫೋಟಕ ವಸ್ತುಗಳ ಸಮೇತ ಬೆಂಗಳೂರಿನ ಆರ್​.ಟಿ.ನಗರ, ಹೆಬ್ಬಾಳದಲ್ಲಿ ಸಿಕ್ಕಿ ಬಿದ್ದಿತ್ತು. ಇದೀಗ ಪ್ರಮುಖ ಆರೋಪಿ ಜುನೈದ್​ಗಾಗಿ ಎನ್​ಐಎ ಹುಡುಕಾಟ ನಡೆಸುತ್ತಿದೆ. ಈ ವಿಚಾರ ಸಂಬಂಧ ದಾಳಿ ನಡೆಸಿದಾಗ ಡಾ. ನಾಗರಾಜ್, ಚಂದ್ ಪಾಷಾ ಹಾಗೂ ಅನೀಸ್ ಫಾತೀಮಾ ಸಿಕ್ಕಿಬಿದ್ದಿದ್ದಾರೆ.

 

Share This Article
error: Content is protected !!
";