ಹಸುಗಳ ಕೆಚ್ಚಲು ಕೊಯ್ದ ಘಟನೆ ಓರ್ವನ ಬಂಧನ, ಕೃತ್ಯದ ಹಿಂದಿರುವವರನ್ನು ಬಂಧಿಸಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು
, ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಪತ್ತೆ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಮಾಡಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಹಿಂದೂಗಳಿಗೆ ಘಾಸಿಯಾಗುವಂತೆ ಮಾಡಿದೆ. ಹಸುಗಳ ಕೆಚ್ಚಲು ಕೊಯ್ದಿರುವ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ, ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ.

ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.
ಚಾಮರಾಜಪೇಟೆಯಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು
, ಅದನ್ನು ವಕ್ಫ್​ಗೆ ನೀಡಲು ಪ್ರಯತ್ನ ನಡೆದಿತ್ತು. ಸುಮಾರು 500 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ಲೂಟಿ ಮಾಡಲು ನಕಲಿ ದಾಖಲೆಗಳನ್ನು ಸರ್ಕಾರ ಸೃಷ್ಟಿ ಮಾಡಿತ್ತು. ಅದರ ವಿರುದ್ಧ ಹೋರಾಟ ಮಾಡಿದ ಕರ್ಣ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಿದ್ದಾರೆ. ಸಚಿವ ಜಮೀರ್‌ಅಹ್ಮದ್‌ಹಸು ನೀಡುವುದರಿಂದ ಪರಿಹಾರ ಸಿಗಲ್ಲ. ಇದಕ್ಕೆ ನ್ಯಾಯ ಸಿಗಬೇಕಿದೆ ಎಂದು ವಿಪಕ್ಷ ನಾಯಕ ಅಶೋಕ್ ಆಗ್ರಹ ಮಾಡಿದ್ದಾರೆ.

ಸಿಎಂ ಹುನ್ನಾರ:
ಸಾರ್ವಜನಿಕ ಕಾರ್ಯಕ್ರಮದಲ್ಲಿ ಎರಡು ಮಕ್ಕಳು ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನೇ ಮುಸ್ಲಿಮರ ಬಳಿ ಹೋಗಿ ಸಿದ್ದರಾಮಯ್ಯ ಹೇಳಲಿ. ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ
, ಮುಸ್ಲಿಮರ ಸಂಖ್ಯೆ ಹೆಚ್ಚಲಿ ಎಂಬುದು ಅವರ ಉದ್ದೇಶ. ಒಂದು ಧರ್ಮಕ್ಕೆ ಬೆಣ್ಣೆ, ಮತ್ತೊಂದು ಧರ್ಮಕ್ಕೆ ಸುಣ್ಣ ಹಚ್ಚಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

 

- Advertisement -  - Advertisement - 
Share This Article
error: Content is protected !!
";