ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿಯಲ್ಲಿ ಎರಡನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಗುರುತು ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಈ ಜಾಗಗಳ ಪೂರ್ವಕಾರ್ಯಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ತಂಡ ಏ.7 ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ.
ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್‌ಐಐಡಿಸಿ ವತಿಯಿಂದ ರೂ. 1.21 ಲಕ್ಷ ಶುಲ್ಕ ಪಾವತಿಸಲಾಗಿದೆ ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.