ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೇಂದ್ರಾಡಳಿತ ಪ್ರದೇಶವಾದ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ಅವರು ರಾಜೀನಾಮೆ ನೀಡಿದ್ದಾರೆ.
ನಿರ್ಗಮಿತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿಲುವನ್ನು ಸಂಪುಟದ ಇತರೆ ಸಚಿವರು ಸೇರಿದಂತೆ ಆಮ್ ಆದ್ಮಿ ಪಾರ್ಟಿ ಸರ್ವಾನುಮತದಿಂದ ಅಂಗೀಕರಿಸಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಅರವಿಂದ್ ಕೇಜ್ರಿವಾಲ್ ನೀಡಿರುವ ರಾಜೀನಾಮೆ ಪತ್ರವನ್ನು ರಾಷ್ಟ್ರಪತ್ರಿ ದ್ರೌಪದಿ ಮುರ್ಮು ಅವರಿಗೆ ಬುಧವಾರ ವರ್ಗಾಯಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಸಂಪುಟದ ಸಹದ್ಯೋಗಿ ಸಚಿವೆ ಆತಿಶಿ ಅವರು ಇದೇ ಸೆಪ್ಟೆಂಬರ್-21 ರಂದು ದೆಹಲಿಯ ಮುಖ್ಯಮಂತ್ರಿಗಳಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಕಳೆದ ವಾರ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಮಂಜೂರು ಬಳಿಕ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಹೊರ ಬಂದು ಜನರು ಮತ್ತೇ ಅಧಿಕಾರ ನೀಡುವವರೆಗೂ ಮುಖ್ಯಮಂತ್ರಿಯಾಗಿ ಮುಂದುವರೆಯುವುದಿಲ್ಲ, ಹಾಗಾಗಿ ರಾಜೀನಾಮೆ ಸಲ್ಲುಸುತ್ತೇನೆಂದು ಹೇಳಿಕೆ ಕೊಟ್ಟಿದ್ದರು. ಅದರಂತೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಸಲ್ಲಿಸಿದ್ದಾರೆ.