ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಅರವಿಂದ ಅವರಿಗೆ ವಿಶ್ವವಿದ್ಯಾನಿಲಯವು ಕನ್ನಡ ವಿಷಯದಲ್ಲಿ ಡಾಕ್ಟರೇಟ್ (ಪಿಎಚ್.ಡಿ) ಪದವಿ ಘೋಷಿಸಿದೆ.
ಅರವಿಂದ ಅವರು ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾದ ಪ್ರೊ. ಅಣ್ಣಮ್ಮ ಅವರ ಮಾರ್ಗದರ್ಶನದಲ್ಲಿ ಪೂರ್ಣಕಾಲಿಕ ಸಂಶೋಧನಾರ್ಥಿಯಾಗಿ “ವಚನಕಾರ ಸಿದ್ಧರಾಮನ ಅಧ್ಯಯನಗಳ ತಾತ್ವಿಕ ಸ್ವರೂಪ” ಎಂಬ ವಿಷಯದ ಕುರಿತು ಮಂಡಿಸಿದ್ದ ಸಂಶೋಧನಾ ಮಹಾಪ್ರಬಂಧವನ್ನು ವಿಶ್ವವಿದ್ಯಾನಿಲಯವು ಅಂಗೀಕರಿಸಿ ಈ ಪದವಿ ನೀಡಿದೆ.
ಡಾ. ಅರವಿಂದ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಪಾಳ್ಯ ಗ್ರಾಮದವರಾಗಿದ್ದು, ಏಕಾಂತಪ್ಪ ಹೆಚ್. ಹಾಗೂ ಶ್ರೀಮತಿ ಜಯಮ್ಮ ದಂಪತಿಗಳ ಪುತ್ರರಾಗಿದ್ದಾರೆ.
ಪ್ರಸ್ತುತ ಇವರು ತುಮಕೂರಿನ ವೈಸಿರಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

