ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ / ವಾಹಿನಿ ಯೋಜನೆ, ವಾಸವಿ ಜಲ ಶಕ್ತಿ ಯೋಜನೆ, ಅರಿವು ಶೈ ಕ್ಷಣಿಕ ಸಾಲ ಯೋಜನೆ-ಸಿಇಟಿ ಹಾಗೂ ನೀಟ್ ಕೌನ್ಸಿಲಿಂಗ್ ನಂತರದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ https://kacdc.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು 2025 ರ ಜುಲೈ 31 ಕೊನೆಯ ದಿನಾಂಕವಾಗಿದೆ.
ಈ ಯೋಜನೆಗಳ ಪ್ರಯೋಜನ ಪಡೆಯಲು ಅರ್ಹ ಆಸಕ್ತರು ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು ಮತ್ತು “ನಮೂನೆ-ಜಿ” ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆದಿರಬೇಕು.
ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಗೆ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಅರ್ಹ ಅರ್ಜಿದಾರರುಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ವಿವರಗಳಿಗೆ ಜಿಲ್ಲಾ ಕಛೇರಿ ಸಹಾಯವಾಣಿ ಸಂಖ್ಯೆ 080-23539601 ನ್ನು ಕಚೇರಿ ಸಮಯದ ವೇಳೆ ಬೆಳಿಗ್ಗೆ 10.00 ರಿಂದ ಸಂಜೆ 5.30 ವರೆಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಉತ್ತರ ಜಿಲ್ಲೆ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.