ಗೌರವ ಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿವಿಧ ಬೇಡಿಕೆಗಳಲ್ಲಿ ಪ್ರಮುಖವಾದ ಗೌರವ ಧನ ಹೆಚ್ಚಳ ಮಾಡಬೇಕು ಹಾಗೂ ಕೆಲಸದಿಂದ ವಜಾಗೊಳಿಸುವ ನಿರ್ಧಾರ ಕೂಡಲೇ ಕೈಬಿಡುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ಪ್ರತಿಭಟನೆ ನಡೆಸಿ ಸರ್ಕಾರವನ್ನು ಆಗ್ರಹಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ‌ಒತ್ತಾಯಿಸಿದರು.

- Advertisement - 

ಸಮಾಜ ಮತ್ತು ಆರೋಗ್ಯ ಇಲಾಖೆಯ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೆ, ಇತ್ತೀಚೆಗೆ 7 ಸಾವಿರ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ವಜಾಗೊಳಿಸುವ ರಾಜ್ಯ ಸರ್ಕಾರದ ನಿರ್ಧರಿಸಿರುವುದು ಸರಿಯಲ್ಲ. ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ಪ್ರಸ್ತುತ ನೀಡುತ್ತಿರುವ ಗೌರವ ಧನ ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು‌ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಮುಖ್ಯಮಂತ್ರಿಗಳು ಖುದ್ದಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಕಳೆದ ಬಾರಿ ಪ್ರತಿಭಟನೆ ನಡೆಸಿದಾಗ ನೀಡಿದ್ದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತಿಗೆ ತಪ್ಪಿದ್ದಾರೆ. ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ, ನಾವು ಕೇವಲ ಭರವಸೆಗಳನ್ನು ಕೇಳಿ ಸುಮ್ಮನಾಗುವುದಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಆಶಾ ಕಾರ್ಯಕರ್ತೆಯರ ಸಂಘದ ಉಪಾಧ್ಯಕ್ಷೆ ರಮಾ ಟಿ.ಸಿ. ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

- Advertisement - 

ರಾಜ್ಯ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಹಳ್ಳಿ ಹಳ್ಳಿಗಳಿಂದ ಆಶಾ ಕಾರ್ಯಕರ್ತೆಯರೊಂದಿಗೆ ವಿಧಾನಸೌಧ ಚಲೋ ಸೇರಿದಂತೆ ಬೃಹತ್ ಮಟ್ಟದ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ಇದೇ ಸಂದರ್ಭದಲ್ಲಿ‌ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

 

 

Share This Article
error: Content is protected !!
";