ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ: ಪಕ್ಷದ ಸಂಘಟನೆಗೆ ಅಶೋಕ್ ಕರೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ​ಬೀದರ್:
ಜಿಲ್ಲೆಯ ಔರಾದ್ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಆರ್. ಅಶೋಕ್ ಅವರು ಭಾಗವಹಿಸಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.

​ಪಕ್ಷದ ಸಿದ್ಧಾಂತಗಳನ್ನು ತಳಮಟ್ಟದ ಕಾರ್ಯಕರ್ತರಿಗೆ ತಲುಪಿಸುವ ಹಾಗೂ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ಪ್ರಶಿಕ್ಷಣ ವರ್ಗವನ್ನು ಆಯೋಜಿಸಲಾಗಿತ್ತು.
​​ಈ ಸಂದರ್ಭದಲ್ಲಿ ರಾಜ್ಯದ ಪ್ರಮುಖ ನಾಯಕರು ಹಾಗೂ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.

- Advertisement - 

​ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಶಾಸಕರಾದ ಪ್ರಭು ಚೌಹಾಣ್, ಶರಣು ಸಲ್ಗರ್, ಮುಖಂಡರಾದ ಸಿದ್ದು ಪಾಟೀಲ್, ಕಲ್ಬುರ್ಗಿ ವಿಭಾಗದ ಸಹಪ್ರಭಾರಿ ಶರಣಪ್ಪ ತಡವಾರ್, ಪ್ರಶಿಕ್ಷಣ ರಾಜ್ಯ ಸಂಚಾಲಕ ರಾಜಶೇಖರ್ ನಾಗಮೂರ್ತಿ, ​ ಕಿರಣ್ ಪಾಟೀಲ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧವ್ ಹಾಸೂರೆ,​ಶ್ರೀ ಮಂಡಲ ಅಧ್ಯಕ್ಷ ರಾಮ್ ಶೆಟ್ಟಿ ಪನ್ನಾಳೆ ಸೇರಿದಂತೆ ಮತ್ತಿತರರ ಮುಖಂಡರು ಪಾಲ್ಗೊಂಡಿದ್ದರು.

​”ಪಕ್ಷದ ಸಿದ್ಧಾಂತ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯರ ಅಂತ್ಯೋದಯದ ಪರಿಕಲ್ಪನೆಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಇಂತಹ ಪ್ರಶಿಕ್ಷಣ ವರ್ಗಗಳು ದಿಕ್ಸೂಚಿಯಾಗಲಿವೆ,” ಎಂದು ಈ ವೇಳೆ ನಾಯಕರು ಅಭಿಪ್ರಾಯಪಟ್ಟರು.

- Advertisement - 

​ಸಭೆಯಲ್ಲಿ ಕ್ಷೇತ್ರದ ನೂರಾರು ಕಾರ್ಯಕರ್ತರು ಪಾಲ್ಗೊಂಡು ತರಬೇತಿ ಪಡೆದರು. ಕಾರ್ಯಕ್ರಮವು ಪಕ್ಷದ ಶಿಸ್ತು ಮತ್ತು ಭವಿಷ್ಯದ ಕಾರ್ಯತಂತ್ರಗಳ ಕುರಿತು ಮಹತ್ವದ ಚರ್ಚೆಗಳಿಗೆ ಸಾಕ್ಷಿಯಾಯಿತು.

 

Share This Article
error: Content is protected !!
";