ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೂನ್ಯ ಸಾಧನೆ ಮಾಡಲು ರಾಹುಲ್ ಗಾಂಧಿ ಅವರ ಬೆನ್ನಿಗೆ ಬೆನ್ನು ಕೊಟ್ಟು ಸಹಕರಿಸಿದ ಸ್ಟಾರ್ ಕ್ಯಾಂಪೆನರ್ ಡಿ.ಕೆ.ಶಿವಕುಮಾರ್ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ದೆಹಲಿ ವಿಧಾನಸಭೆಯ ಕಳಪೆ ಫಲಿತಾಂಶವನ್ನೇ ಆಧಾರವಾಗಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಅವರನ್ನ ಕಡೆಗಣಿಸಿದರೆ ಕರ್ನಾಟದಲ್ಲಿ ಕಾಂಗ್ರೆಸ್ ಪಕ್ಷದ ಗತಿ ಏನಾಗಲಿದೆ ಅಂತ ಸಿದ್ದರಾಮಯ್ಯ ಬಣದವರು ಕಾಂಗ್ರೆಸ್ ಹೈಕಮಾಂಡ್ ಗೆ ರಹಸ್ಯ ಪತ್ರಗಳನ್ನು ಬರೆಯುತ್ತಿದ್ದಾರೆ ಎನ್ನುವ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಜೋರಾಗಿಯೇ ಹರಿದಾಡುತ್ತಿದೆ ಎಂದು ಅಶೋಕ್ ಹೇಳಿದ್ದಾರೆ.