ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಐಪಿಎಲ್ ವಿಜಯೋತ್ಸವದ ವೇಳೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಸಂಭವಿಸಿದ ದುರಂತದಲ್ಲಿ ಪ್ರಾಣ ಕಳೆದುಕೊಂಡ 11 ಅಮಾಯಕ ಯುವಕರ ಕುಟುಂಬದವರಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಸಿದರು.
ದುರಂತಕ್ಕೆ ಪೊಲೀಸ್ ಇಲಾಖೆಯೇ ಕಾರಣ ಎಂದು ಬಿಂಬಿಸುವ ಮೂಲಕ ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದು, ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಲು ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ ಎಂದು ಅಶೋಕ್ ತಿಳಿಸಿದರು.