ಶೇ. 60ರಷ್ಟು ಲಂಚ ಹೊಡೆಯುತ್ತಿರುವ ಕಾಂಗ್ರೆಸ್ ಸರ್ಕಾರ-ಅಶೋಕ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶೇ.40 ರಷ್ಟು ಸರ್ಕಾರ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ, ಶೇ.60ರಷ್ಟು ಲಂಚ ಹೊಡೆದು ರಾಜ್ಯವನ್ನ ಲೂಟಿ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಟ್ವೀಟ್ ಮಾಡಿ ಗಂಭೀರ ಆರೋಪ ಮಾಡಿದ್ದಾರೆ.

ನಗರಾಭಿವೃದ್ದಿ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಖಾಸಗಿ ಕಂಪನಿಯೊಂದು ಏಪ್ರಿಲ್-22ರಂದು ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಸರ್ಕಾರದ 60% ಲಂಚಾವತಾರದ ಮುಖವಾಡವನ್ನು ಬಯಲು ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರ ಸಂಘ ಬರೆದಿರುವ ಪತ್ರದಲ್ಲಿ 700 ಕೋಟಿ ರೂಪಾಯಿ ಲಂಚದ ಬಗ್ಗೆ ಆರೋಪ ಮಾಡಿದ್ದಾರೆ, ಈಗ ಖಾಸಗಿ ಕಂಪನಿಯೊಂದು 60% ಕಮಿಷನ್ ಆರೋಪ ಮಾಡುತ್ತಿದೆ.

ದಿನ ಬೆಳಗಾದರೆ ಒಂದು ಹೊಸ ಹಗರಣದ ಕಥೆ ಕೇಳಿ ಕೇಳಿ ಕನ್ನಡಿಗರು ರೋಸಿ ಹೋಗಿದ್ದಾರೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ರಾಜೀನಾಮೆ ಕೊಟ್ಟು ಇರುವ ಅಲ್ಪ ಸ್ವಲ್ಪ ಗೌರವವನ್ನದರೂ ಉಳಿಸಿಕೊಳ್ಳಿ ಎಂದು ವಿಪಕ್ಷ ನಾಯಕ ಅಶೋಕ್ ತಾಕೀತು ಮಾಡಿದ್ದಾರೆ.

 

- Advertisement -  - Advertisement - 
Share This Article
error: Content is protected !!
";